ETV Bharat / state

ದೆಹಲಿಗೆ ಶ್ರೀಘ್ರ ರಾಜ್ಯ ಸರ್ಕಾರದ ನಿಯೋಗ.. ಮಹದಾಯಿ ಅಧಿಸೂಚನೆಗೆ ಕೇಂದ್ರದ ಮೇಲೆ ಒತ್ತಡ! - Decision to take the State Government's delegation for a quick notification

ಸುಪ್ರೀಂಕೋರ್ಟ್ ನಿರ್ದೇಶನದಂತೆ ನ್ಯಾಯಾಧಿಕರಣ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು. ಆದಷ್ಟು ಬೇಗ ಅಧಿಸೂಚನೆ ಹೊರಬಿದ್ದರೆ, ಮುಂದಿನ ಹಾದಿ ಸುಗಮವಾಗಲಿದೆ. ಹೀಗಾಗಿ ಆದಷ್ಟು ಬೇಗ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೇಲೆ ಅಧಿಕಾರಿ ವರ್ಗ ಹಾಗೂ ರಾಜಕೀಯ ವಲಯದಿಂದ ಒತ್ತಡ ಹೇರುವಂತೆ ಸಭೆಯಲ್ಲಿ ಸಮಾಲೋಚನೆ ನಡೆಯಿತು.

Mahadayi water Sharing Problem
ರಾಜ್ಯ ಸರ್ಕಾರದ ನಿಯೋಗ ಕೊಂಡೊಯ್ಯಲು ನಿರ್ಧಾರ
author img

By

Published : Feb 24, 2020, 4:31 PM IST

ಬೆಂಗಳೂರು : ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹೇರುವ ಸಲುವಾಗಿ ರಾಜ್ಯ ಸರ್ಕಾರದ ನಿಯೋಗ‌ ಕೊಂಡೊಯ್ಯಲು ನಿರ್ಧರಿಸಲಾಗಿದೆ.

ಮಹದಾಯಿ ನದಿ‌ ನೀರು ಹಂಚಿಕೆ‌ ಸಂಬಂಧ ಸುಪ್ರೀಂ ತೀರ್ಪು ಹಿನ್ನೆಲೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಈ ವೇಳೆ ಮಹದಾಯಿ ನದಿ‌ ನೀರು‌ ಹಂಚಿಕೆ ಕುರಿತಂತೆ ಕೂಡಲೇ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ‌ಒತ್ತಡ ಹೇರುವ ಸಂಬಂಧ ರಾಜ್ಯ ಸರ್ಕಾರದ ನಿಯೋಗ ಕರೆದೊಯ್ದು, ಕೇಂದ್ರದ ಸಚಿವರುಗಳನ್ನು‌ ಭೇಟಿ ಮಾಡಲು ನಿರ್ಧರಿಸಲಾಗಿದೆ.

ಸುಪ್ರೀಂಕೋರ್ಟ್ ನಿರ್ದೇಶನದಂತೆ ನ್ಯಾಯಾಧಿಕರಣ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು. ಆದಷ್ಟು ಬೇಗ ಅಧಿಸೂಚನೆ ಹೊರಬಿದ್ದರೆ, ಮುಂದಿನ ಹಾದಿ ಸುಗಮವಾಗಲಿದೆ. ಹೀಗಾಗಿ ಆದಷ್ಟು ಬೇಗ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೇಲೆ ಅಧಿಕಾರಿ ವರ್ಗ ಹಾಗೂ ರಾಜಕೀಯ ವಲಯದಿಂದ ಒತ್ತಡ ಹೇರುವಂತೆ ಸಭೆಯಲ್ಲಿ ಸಮಾಲೋಚನೆ ನಡೆಯಿತು.

ಸುಪ್ರೀಂಕೋರ್ಟ್‌ನಲ್ಲಿ ಅಂತಿಮ ವಿಚಾರಣೆಯು ಜುಲೈ 15ರಿಂದ ಪ್ರಾರಂಭವಾಗಲಿದೆ. ಅಷ್ಟರೊಳಗೆ ಅಧಿಸೂಚನೆ ಹೊರಡಿಸುವಂತೆ ‌ಪ್ರಧಾನಮಂತ್ರಿಗಳನ್ನು ಮತ್ತು ಕೇಂದ್ರದ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ‌ಒತ್ತಾಯಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಾಳೆ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ನೇತೃತ್ವದ ನಿಯೋಗ ದೆಹಲಿಗೆ ತೆರಳಿ ಕೇಂದ್ರ ಜಲ ಆಯೋಗ ಹಾಗೂ ಜಲಸಂಪನ್ಮೂಲ ಅಧಿಕಾರಿಗಳನ್ನು ಭೇಟಿಯಾಗಿ ಅಧಿಸೂಚನೆ ಹೊರಡಿಸುವ ಸಂಬಂಧ ಒತ್ತಡ ಹೇರಲಿದ್ದಾರೆ.

ಸಂಜೆ ಆರು ಗಂಟೆಗೆ ದೆಹಲಿಯಲ್ಲಿ ಕೇಂದ್ರ ಜಲ ಆಯೋಗ ಅಧ್ಯಕ್ಷರ ನೇತೃತ್ವದಲ್ಲಿ ನಡೆಯುವ ತಾಂತ್ರಿಕ ಸಮಿತಿ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಸಚಿವರಾದ ರಮೇಶ್ ಜಾರಕಿಹೊಳಿ, ಬೊಮ್ಮಾಯಿ ನೇತೃತ್ವದ ರಾಜ್ಯ ನಿಯೋಗವನ್ನು ಕಳುಹಿಸಿ ಕೇಂದ್ರದ ಮೇಲೆ ಒತ್ತಡ ಹೇರಲು ನಿರ್ಧರಿಸಲಾಗಿದೆ. ಸಿಎಂ ಜತೆ ಚರ್ಚಿಸಿ ಈ ವಾರದೊಳಗೆ ನಿಯೋಗ ಹೋಗುವ ಸಾಧ್ಯತೆ ಇದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.