ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನ ವಿವಿಧೆಡೆ ಎಸಿಬಿ ಅಧಿಕಾರಿಗಳು ಬಿಬಿಎಂಪಿ ಕಚೇರಿಗಳಲ್ಲಿ ದಾಳಿ ನಡೆಸುವ ಮೂಲಕ ಬಿಬಿಎಂಪಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಟಿಡಿಆರ್ ವಿಭಾಗದಲ್ಲಿ ಭಾರಿ ಗೋಲ್ಮಾಲ್ ನಡೆದಿರುವ ದೂರಿನ ಹಿನ್ನೆಲೆ ಮಹದೇವಪುರ ಬಿಬಿಎಂಪಿ ಕಚೇರಿಯಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.
ಎಸಿಬಿ ಅಧಿಕಾರಿಗಳು ಬೆಳಗ್ಗೆಯೇ ದಾಳಿ ನಡೆಸಿದ ಮಾಹಿತಿ ಪಡೆದ ಬಿಬಿಎಂಪಿ ಅಧಿಕಾರಿಗಳು ಕಚೇರಿಗಳತ್ತ ಸುಳಿಯಲು ತಡ ಮಾಡಿದ ಪ್ರಸಂಗ ನಡೆಯಿತು.
ಎಸಿಬಿ ಡಿವೈಎಸ್ಪಿ ಶಿವಶಂಕರ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇದರಿಂದಾಗಿ ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ನಡುಕ ಉಂಟಾಗಿದೆ ಎನ್ನಲಾಗಿದೆ. ಆದರೆ ಎಂದಿನಂತೆ ಬಿಬಿಎಂಪಿಯಲ್ಲಿ ಸಾರ್ವಜನಿಕರ ಕಾರ್ಯಕ್ಕೆ ಅನುಕೂಲ ಮಾಡಲಾಗಿದೆ. ಇತ್ತ ಏಕಕಾಲಕ್ಕೆ ನಗರದ ಹಲವೆಡೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.