ಬೆಂಗಳೂರು: ರಾಜ್ಯಗಳನ್ನು ಬೇರ್ಪಡಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರ ಮೊದಲು ನಿಲ್ಲಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮ ಭಾರತ ಅನೇಕ ರಾಜ್ಯಗಳಿಂದ ಕೂಡಿದೆ. ಉಭಯ ರಾಜ್ಯಗಳು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಪ್ರತಿ ರಾಜ್ಯ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಕಾನೂನು ಎಲ್ಲರಿಗೂ ಒಂದೇ. ಯಾರಾದರೂ ಗಲಾಟೆ ಮಾಡಿದರೆ ಖಂಡಿಸುತ್ತೇನೆ. ಮಹಾರಾಷ್ಟ್ರ ಸಿಎಂ ಹಾಗೂ ಹೋಮ್ ಮಿನಿಸ್ಟರ್ ಕೂಡಲೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಮಹಾರಾಷ್ಟ್ರ 2004ರಲ್ಲಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. ನಾವೂ ಆಗಿನಿಂದಲೂ ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೀದ್ದೇವೆ. ನಮಗೆ ನಂಬಿಕೆ ಇದೆ. ನ್ಯಾಯ ನಮ್ಮ ಪರ ಇದೆ. ನಾವೂ ಕಾನೂನು ಸಮರ ಮಾಡುತ್ತಿದ್ದೇವೆ. ನಾವೂ ನಮ್ಮ ರಾಜ್ಯದ ಗಡಿ, ಜನರನ್ನ ಉಳಿಸಿಕೊಳ್ಳುತ್ತೇವೆ. ನಾವೂ ಮೊದಲು ಕಾನೂನು ಹೋರಾಟ ಮಾಡುತ್ತೇವೆ. ಸುಪ್ರೀಂಕೋರ್ಟ್ ಮುಂದೆ ಇದೆ. ಅಂತಿಮವಾಗಿ ಸುಪ್ರೀಂಕೋರ್ಟ್ ಪ್ರಕರಣ ಇತ್ಯರ್ಥ ಮಾಡಲಿದೆ ಎಂದರು.
ಇದನ್ನೂ ಓದಿ: ಮಹಾರಾಷ್ಟ್ರದ ಒಂದಿಂಚು ಭೂಮಿಯನ್ನೂ ಬಿಟ್ಟು ಕೊಡುವುದಿಲ್ಲ: ಏಕನಾಥ್ ಶಿಂಧೆ
ಸಂವಿಧಾನ ಬದ್ಧವಾಗಿ 3ನೇ ಕಲಂ ಪ್ರಕಾರ ರಾಜ್ಯ ಪುನರ್ ವಿಂಗಡನಾ ಕಾಯ್ದೆ ರಚನೆಯಾಯಿತು. ನಾವೂ ಕಾನೂನು ತಜ್ಞರ ಅಭಿಪ್ರಾಯ ಪಡೆದು ಕಾನೂನು ಸಮರ ಮುಂದುವರಿಸುತ್ತೇವೆ. ಮುಂದಿನ ವಾರ ಆಲ್ ಪಾರ್ಟಿ ಮೀಟಿಂಗ್ ಕರೆದು ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.