ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 151ನೇ ಜಯಂತಿ ಮತ್ತು ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 116ನೇ ಜನ್ಮ ದಿನಾಚರಣೆಯನ್ನು ಇಂದು ಜೆಡಿಎಸ್ ಕಚೇರಿಯಲ್ಲಿ ಆಚರಿಸಲಾಯಿತು.
ಇಬ್ಬರು ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ, ಜೆಡಿಎಸ್ ಕಾರ್ಯಾಧ್ಯಕ್ಷ ಎಂ ಎಸ್ ನಾರಾಯಣರಾವ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ಸೇರಿ ಪಕ್ಷದ ಮುಖಂಡರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಗಾಂಧೀಜಿ ಗೀತೆಗಳು, ದೇಶಭಕ್ತಿ ಗೀತೆಗಳು, ಖುರಾನ್ ಪಠಣ ಹಾಗೂ ಬೈಬಲ್ ಪಠಣ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ನಾಯಕರ ಗೈರು: ಕಾರ್ಯಕ್ರಮದ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಅವರ ಹೆಸರು ಇತ್ತು. ಆದರೆ, ಮೂವರು ನಾಯಕರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು.