ETV Bharat / state

ಪ್ರತಿಭಟನೆ ಮೂಲಕ ದೇಶದ ಜನರ ದಿಕ್ಕು ತಪ್ಪಿಸುವ ಕಾಂಗ್ರೆಸ್: ಮಹೇಶ್ ಟೆಂಗಿನಕಾಯಿ - ಬೆಂಗಳೂರಿನಲ್ಲಿ ಕಾಂಗ್ರೆಸ್​ ಪ್ರತಿಭಟನೆ ಖಂಡಿಸಿ ಬಿಜೆಪಿ ನಾಯಕರ ಹೇಳಿಕೆ

ಸೋನಿಯಾ ಗಾಂಧಿ ವಿರುದ್ದ ನಡೆಯುತ್ತಿರುವ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್​ ನಾಯಕರು ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್​ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್​ ಪಕ್ಷದವರಿಗೆ ನೈತಿಕತೆ ಇದ್ದರೆ ಕೇಸನ್ನು ಎದುರಿಸಿ ಆರೋಪ ಮುಕ್ತಾರಗಿ ಹೊರಬರಲಿ ಎಂದು ಸವಾಲೆಸೆದಿದ್ದಾರೆ.

bjp leader
ಬಿಜೆಪಿ ನಾಯಕರು
author img

By

Published : Jul 21, 2022, 5:54 PM IST

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣ ಮುಂದಿಟ್ಟು ಪ್ರತಿಭಟಿಸುವ ಮೂಲಕ ಕಾಂಗ್ರೆಸ್ ಪಕ್ಷದವರು ದೇಶದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತಂತ್ರ ಸಂಸ್ಥೆಯಾದ ಇಡಿಯ ಅಧಿಕಾರಿಗಳು ನ್ಯಾಷನಲ್ ಹೆರಾಲ್ಡ್ ಪ್ರಕರಣದ ಆರೋಪಿಗಳನ್ನು ವಿಚಾರಿಸುವುದು ಸಹಜ ಪ್ರಕ್ರಿಯೆ.

ಆದರೆ, ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಕರೆದಿದೆ ಎಂದು ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ಮಾಡುವುದು ಯಾವ ನೈತಿಕತೆಯ ಅಡಿ ಎಂದು ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಪಕ್ಷದವರಿಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್​ ಅವರು ಬರೆದ ಸಂವಿಧಾನದಲ್ಲಿ ವಿಶ್ವಾಸ ಇಲ್ಲವೇ ಎಂದು ಪ್ರಶ್ನಿಸಿದರು.

ಇಂದಿನ ಕಾಂಗ್ರೆಸ್ ಹೋರಾಟವನ್ನು ಬಿಜೆಪಿ ಖಂಡಿಸುತ್ತದೆ. ಕಾಂಗ್ರೆಸ್ಸಿನ ಭ್ರಷ್ಟಾಚಾರ ಇಡೀ ದೇಶದ ಜನರಿಗೆ ಗೊತ್ತಿದೆ. ಕಾಂಗ್ರೆಸ್ಸಿಗರಿಗೆ ನೈತಿಕತೆ ಇದ್ದರೆ, ಪ್ರಾಮಾಣಿಕತೆ, ಸತ್ಯಾಂಶ ಇದ್ದರೆ ಆ ಕೇಸನ್ನು ಎದುರಿಸಿ ಆರೋಪಮುಕ್ತರಾಗಿ ಹೊರಬರಲಿ ಎಂದು ಸವಾಲೆಸೆದರು.

ಬಳಿಕ ವಿಧಾನಪರಿಷತ್ ಸದಸ್ಯ ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಇವತ್ತಿನ ದಿನ ಕಾಂಗ್ರೆಸ್ ಮುಖಂಡರನ್ನು ದೇಶದಲ್ಲಿ ಯಾರೂ ಪ್ರಶ್ನಿಸಬಾರದು, ಹಾಗೇ ಪ್ರಶ್ನಿಸಿದರೆ ನಾವು ಬೀದಿಗಿಳಿಯುತ್ತೇವೆ ಎಂದು ತಿಳಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಯಾರು ಸಂವಿಧಾನಕ್ಕಿಂತ ದೊಡ್ಡವರಲ್ಲ. ನರೇಂದ್ರ ಮೋದಿಯವರು, ಅಮಿತ್ ಶಾ ಅವರೂ ತನಿಖೆ ಎದುರಿಸಿ ಹೊರಬಂದಿದ್ದಾರೆ.

ಈಗಿನ ಕಾಂಗ್ರೆಸ್ಸಿಗರ್ಯಾರೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಈಗಿನ ಕಾಂಗ್ರೆಸ್​ ಪಕ್ಷ ದೇಶಕ್ಕೆ ಕೈ ಕೊಡುವ ಪಕ್ಷ. ಇದು ಇಡೀ ದೇಶಕ್ಕೇ ಗೊತ್ತಿದೆ. ಬಿಜೆಪಿ ಮೇಲೆ ಗೂಬೆ ಕೂರಿಸದಿರಿ. ದಾರಿ ತಪ್ಪಿಸುವ ಕೆಲಸ ಬಿಟ್ಟು ವಿಚಾರಣೆ ಎದುರಿಸಿ ಎಂದು ಹೇಳಿದರು.

ಇದನ್ನೂ ಓದಿ: ಗುಜರಾತ್​ನಲ್ಲಿ ಆಪ್ ಗೆದ್ದರೆ ಉಚಿತ ವಿದ್ಯುತ್: ಸಿಎಂ ಕೇಜ್ರಿವಾಲ್ ಭರವಸೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.