ETV Bharat / state

ವಿದ್ಯುತ್​ ಪ್ರಸರಣ ಕೇಂದ್ರಗಳ ಸುತ್ತಲೂ ನೈರ್ಮಲ್ಯ ಕಾಪಾಡಲು ಕ್ರಮ: ಬಿಬಿಎಂಪಿ - ಫಲಕಗಳನ್ನು ಅಳವಡಿಸಲಾಗಿದ್ದು

ಟ್ರಾನ್ಸ್‌ಫಾರ್ಮರ್ ಸೇರಿದಂತೆ ವಿದ್ಯುತ್ ಘಟಕಗಳ ಸುತ್ತಲ ಜಾಗಗಳಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ನೈರ್ಮಲ್ಯ ಕಾಪಾಡಬೇಕು ಎಂದು ಸೂಚನೆ ನೀಡಿತು

maintain-hygiene-around-power-transmission-stations-bbmp
ವಿದ್ಯುತ್​ ಪ್ರಸರಣ ಕೇಂದ್ರಗಳ ಸುತ್ತಲೂ ನೈರ್ಮಲ್ಯ ಕಾಪಾಡಲು ಕ್ರಮ: ಬಿಬಿಎಂಪಿ
author img

By

Published : Feb 13, 2023, 5:50 PM IST

ಬೆಂಗಳೂರು: ನಗರದಲ್ಲಿ ಪಾದಚಾರಿ ಮಾರ್ಗಗಗಳೂ ಸೇರಿದಂತೆ ವಿದ್ಯುತ್ ಪ್ರಸರಣ ಘಟಕಗಳಿರುವಲ್ಲಿ ನೈರ್ಮಲ್ಯವನ್ನು ಕಾಪಾಡುವ ಸಲುವಾಗಿ ಫಲಕಗಳನ್ನು ಅಳವಡಿಸಲಾಗಿದ್ದು, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವುದಾಗಿ ಬಿಬಿಎಂಪಿ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ನಗರದ ಪಾದಚಾರಿ ಮಾರ್ಗಗಳಲ್ಲಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ ಬಿ ಅತ್ರಿ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದದ ಪೀಠಕ್ಕೆ ಬಿಬಿಎಂಪಿ ಪರ ವಕೀಲರು ಈ ಮಾಹಿತಿ ನೀಡಿದರು.

ಈ ಹಿಂದೆ ನಡೆದಿದ್ದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಕೆಲವು ಛಾಯಾಚಿತ್ರಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಟ್ರಾನ್ಸ್​ಫಾರ್ಮರ್​ಗಳು ಸೇರಿದಂತೆ ನಗರದಲ್ಲಿರುವ ವಿದ್ಯುತ್​ ಪ್ರಸರಣ ಕೇಂದ್ರಗಳ ಸುತ್ತಲು ಸ್ವಚ್ಛತೆ ನಿರ್ವಹಣೆ ಮಾಡುತ್ತಿಲ್ಲ. ಇದರಿಂದ ಜನ ನೈರ್ಮಲ್ಯ ಕಾಪಾಡುವುದಕ್ಕೆ ಮುಂದಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದರು.

ಇದನ್ನು ದಾಖಲಿಸಿಕೊಂಡಿದ್ದ ನ್ಯಾಯಪೀಠ, ಟ್ರಾನ್ಸ್‌ಫಾರ್ಮರ್ ಸೇರಿದಂತೆ ವಿದ್ಯುತ್ ಘಟಕಗಳ ಸುತ್ತಲ ಜಾಗಗಳಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ನೈರ್ಮಲ್ಯ ಕಾಪಾಡಬೇಕು ಎಂದು ಸೂಚನೆ ನೀಡಿತು. ಇದರ ಮುಂದುವರೆದ ಭಾಗವಾಗಿ ಸೋಮವಾರ ಬಿಬಿಎಂಪಿ ಪ್ರಮಾಣ ಪತ್ರ ಸಲ್ಲಿಸಿ, ಎಲ್ಲ ವಿದ್ಯುತ್​ ಪ್ರಸರಣ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಫಲಕಗಳನ್ನು ಅಳವಡಿಸಿದ್ದು, ನೈರ್ಮಲ್ಯ ಕಾಪಾಡಬೇಕು ಎಂದು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಪರ ವಕೀಲರು ಹೈಕೋರ್ಟ್​ಗೆ ವಿವರಿಸಿದರು.

ಪ್ರತಿ ತಿಂಗಳ 5 ರಂದು ಸ್ಥಳಾಂತರ ಮಾಡಿದ ಟ್ರಾನ್ಸ್​ಫಾರ್ಮ್ರ್​ಗಳ ವಿವರನ್ನು ನ್ಯಾಯಪೀಠಕ್ಕೆ ಸಲ್ಲಿಸಬೇಕು. ಎಂದು ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು. ಈ ಹಿಂದೆ ನಡೆದ ವಿಚಾರಣೆ ವೇಳೆ ಬೆಸ್ಕಾಂಮ್​ ಪರ ವಕೀಲರು ವಾದ ಮಂಡಿಸಿ, ಈವರೆಗೂ ಸುಮಾರು ಒಟ್ಟು 2,587 ಟ್ರಾನ್ಸ್‌ಫಾರ್ಮರ್‌ಗಳಲ್ಲಿ 1,554 ಸ್ಥಳಾಂತರ ಮಾಡಿದ್ದು, 1,033 ಬಾಕಿ ಉಳಿದಿವೆ. ಈ ಟ್ರಾನ್ಸ್‌ಫಾರ್ಮರ್‌ಗಳನ್ನು ಹಂತ ಹಂತವಾಗಿ ಸ್ಥಳಾಂತರ ಮಾಡುತ್ತಿದ್ದು, 2,023ರ ಸೆಪ್ಟೆಂಬರ್​ ಅಂತ್ಯದ ವೇಳೆಗೆ ಎಲ್ಲವನ್ನೂ ಸ್ಥಳಾಂತರಿಸುವುದಾಗಿ ತಿಳಿಸಿದರು.

1,155 ಟ್ರಾನ್ಸ್‌ಫಾರ್ಮರ್‌ಗಳನ್ನು ಹೊಸ ಸ್ಪನ್ ಪೋಲ್ ರಚನೆಗೆ (ನೆಲಮಟ್ಟದಿಂದ ಎತ್ತರಿಸಿದ) ಪರಿವರ್ತಿಸಲಾಗಿದೆ. ಉಳಿದ ಟ್ರಾನ್ಸ್‌ಫಾರ್ಮರ್ ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಸಂಬಂಧ ಟೆಂಡರ್ ಕರೆದು ಗುತ್ತಿಗೆಗೆ ನೀಡಲಾಗಿದ್ದು, ಕಾರ್ಯಾದೇಶವೂ ಆಗಿದೆ ಎಂದು ವಿವರಿಸಿದ್ದರು.

ಎರಡು ಹಂತಗಳಲ್ಲಿ ಕಾರ್ಯಾಚರಣೆ: ಅಲ್ಲದೆಯೇ, ನಗರದಲ್ಲಿ ಪಾದಚಾರಿ ಮಾರ್ಗಗಳ ಮೇಲಿದ್ದ ಒಟ್ಟು 5,784 ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸುವ ಅಥವಾ ಅವುಗಳನ್ನು ನೆಲಮಟ್ಟದಿಂದ ಎತ್ತರಿಸುವ ಅಗತ್ಯವಿತ್ತು. ಈ ಕಾರ್ಯವನ್ನು 2 ಹಂತಗಳಲ್ಲಿ ಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ 3,164 ಟ್ರಾನ್ಸ್‌ಫಾರ್ಮರ್ ಹೊಸ ಸ್ಪನ್ ಪೋಲ್ ರಚನೆಯ ಮೂಲಕ ಎತ್ತರಿಸಲಾಗಿದೆ. 2 ಟ್ರಾನ್ಸ್‌ಫಾರ್ಮರ್​ಗಳನ್ನು ಅನುಕೂಲಕರ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮೊದಲ ಹಂತದ ಕೆಲಸಗಳು ಈಗಾಗಲೇ ಪೂರ್ಣಗೊಂಡಿವೆ ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿತ್ತು.

ಎರಡನೇ ಹಂತದಲ್ಲಿ, 2588 ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಲಾಗುತ್ತಿದ್ದು, ಈಗಾಗಲೇ 1,155 ಟ್ರಾನ್ಸ್‌ಫಾರ್ಮರ್‌ಗಳನ್ನು ಎತ್ತರಿಸಲಾಗಿದೆ. ಉಳಿದ 1,433 ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 2,023ರ ಸೆಪ್ಟಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಪ್ರಮಾಣಪತ್ರದಲ್ಲಿ ವಿವರಿಸಲಾಗಿತ್ತು. ಅದನ್ನು ದಾಖಲಿಸಿಕೊಂಡಿದ್ದ ಪೀಠ, ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರ ಕಾರ್ಯ ಮುಂದುವರಿಸಲು ನಿರ್ದೇಶಿಸಿದೆ

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ವಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.