ETV Bharat / state

ಕಾಂಗ್ರೆಸ್ ಶಾಸಕಾಂಗ ಸಭೆ: ಪ್ರಮುಖ ನಿರ್ಣಯಗಳನ್ನು ‘ಕೈ’ಗೊಂಡ ನಾಯಕರು - ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಣಯ ಕೈಗೊಂಡರು,

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಾಯಕರು ಪ್ರಮುಖ ನಿರ್ಣಯಗಳನ್ನು ಕೈಗೊಂಡರು.

congress Legislature meeting, Congress Legislature meeting at Bangalore, Major decisions taken in congress Legislature meeting, congress Legislature meeting news, ಕಾಂಗ್ರೆಸ್ ಶಾಸಕಾಂಗ ಸಭೆ, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಣಯ ಕೈಗೊಂಡರು, ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಣಯ ಕೈಗೊಂಡರು, ಕಾಂಗ್ರೆಸ್ ಶಾಸಕಾಂಗ ಸಭೆ ಸುದ್ದಿ,
ಕಾಂಗ್ರೆಸ್ ಶಾಸಕಾಂಗ ಸಭೆ
author img

By

Published : Mar 9, 2021, 8:26 AM IST

ಬೆಂಗಳೂರು: ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವಿವಿಧ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಸಭೆಯಲ್ಲಿ ಈ ಕೆಳಗಿನ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇದಕ್ಕೆ ಪಕ್ಷದ ಎಲ್ಲ ಮುಖಂಡರ ಸಮ್ಮತಿ ಸಹ ಲಭಿಸಿದೆ.

ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಹಿನ್ನೆಲೆ ಬಡವರು, ಮಧ್ಯಮ ವರ್ಗದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಿಲುವಳಿ ಸೂಚನೆ ಮಂಡನೆಗೆ ತೀರ್ಮಾನ ಕೈಗೊಳ್ಳಲಾಗಿದೆ.

ಶಾಸಕ ಸಂಗಮೇಶ್ ಕುಟುಂಬ ಹಾಗೂ ಬೆಂಬಲಿಗರ ಮೇಲೆ ಕೊಲೆ ಯತ್ನ ಕೇಸು ಹಾಕಲಾಗಿದೆ. ಇದು ಸುಳ್ಳು ಕೇಸು. ಯಾವುದೇ ಅಹಿತಕರ ಘಟನೆ ನಡೆಯದಿದ್ದರೂ ಬಂಧಿಸಬೇಕೆಂಬ ಏಕೈಕ ಉದ್ದೇಶದಿಂದ ಕೇಸು ದಾಖಲು ಮಾಡಿಸಲಾಗಿದೆ. ಸದನದಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಸಂಗಮೇಶ್ ಅವರನ್ನು ಒಂದು ವಾರ ಅಮಾನತು ಮಾಡಲಾಗಿದೆ. ಸ್ಪೀಕರ್ ಅವರಿಗೆ ಮನವಿ ಮಾಡಿದರೂ ಅಮಾನತು ಆದೇಶ ವಾಪಸ್ ಪಡೆದಿಲ್ಲ.

ಪೊಲೀಸ್ ದೌರ್ಜನ್ಯ ಖಂಡಿಸಿ 13ರಂದು ಶಿವಮೊಗ್ಗ ಚಲೋ ನಡೆಸಲು ತೀರ್ಮಾನ ಮಾಡಲಾಗಿದೆ. ಎಲ್ಲ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಲು ನಿರ್ಧಾರ ಮಾಡಿದ್ದಾರೆ.

ಸಿ.ಡಿ ಪ್ರಕರಣ, ಪ್ರಸಾರಕ್ಕೆ ತಡೆ ಕೋರಿ ಸಚಿವರಿಂದ ನ್ಯಾಯಾಲಯಕ್ಕೆ ಮೊರೆ ಬಗ್ಗೆ ಉಭಯ ಸದನದಲ್ಲಿ ಹೋರಾಟ ಮಾಡಲಾಗುವುದು. ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ನಿರ್ಣಯ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಹಿರಿಯ ಮುಖಂಡರಾದ ಡಾ. ಜಿ. ಪರಮೇಶ್ವರ, ಆರ್.ವಿ. ದೇಶಪಾಂಡೆ, ಕೆ.ಆರ್. ರಮೇಶ್ ಕುಮಾರ್, ಶ್ಯಾಮನೂರು ಶಿವಶಂಕರಪ್ಪ, ಸಿ.ಎಂ. ಇಬ್ರಾಹಿಂ, ಕೆ.ಜೆ. ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ಧೃವನಾರಾಯಣ್ ಸೇರಿದಂತೆ ಮತ್ತಿತರರ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.