ETV Bharat / state

ಸಿದ್ದರಾಮಯ್ಯ ನೇತೃತ್ವದ ನಡೆದ ಸಭೆ: ಬಿಬಿಎಂಪಿ ಕಾಯ್ದೆ ಸಮಗ್ರ ತಿದ್ದುಪಡಿಗೆ ಬೆಂಬಲ

ಬಿಬಿಎಂಪಿ ಕಾಯ್ದೆ ಸಮಗ್ರ ತಿದ್ದುಪಡಿ ಮಾಡಬೇಕು. ಇದಕ್ಕೆ ವಿಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಶಾಸಕರೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Make comprehensive amendment of the BBMP Act
ಬಿಬಿಎಂಪಿ ಕಾಯ್ದೆ ಸಮಗ್ರ ತಿದ್ದುಪಡಿಗೆ ಬೆಂಬಲ
author img

By

Published : Sep 4, 2020, 12:54 AM IST

ಬೆಂಗಳೂರು: ರಾಜ್ಯ ಸರ್ಕಾರ ಬಿಬಿಎಂಪಿ ಕಾಯ್ದೆಯನ್ನು ಕಾಟಾಚಾರಕ್ಕೆ ತಿದ್ದುಪಡಿ ಮಾಡದೇ ಸಮಗ್ರ ತಿದ್ದುಪಡಿ ಮಾಡಲು ಎಲ್ಲ ರೀತಿಯ ಸಹಕಾರ ನೀಡಲು ಕಾಂಗ್ರೆಸ್ ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಬಿಬಿಎಂಪಿ ಕಾಯ್ದೆ ಸಮಗ್ರ ತಿದ್ದುಪಡಿಗೆ ಬೆಂಬಲ

ಪಕ್ಷದ ಶಾಸಕರೊಂದಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಈ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯಲ್ಲಿ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್. ಪಾಟೀಲ್ ಸಮಿತಿ ವರದಿ ಹಾಗೂ ಅಬೈಡ್ ಸಲ್ಲಿಸಿದ್ದ ವರದಿಯನ್ನು ಪರಿಗಣಿಸಬೇಕು ಮತ್ತು ರಾಜ್ಯ ಸರ್ಕಾರ ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಾಯ್ದೆಗೆ ತಿದ್ದುಪಡಿ ತರಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ 1 ಕೋಟಿ ಜನ ಸಂಖ್ಯೆ ಇರುವ ಮಹಾನಗರಗಳಲ್ಲಿ ಎಷ್ಟು ಪಾಲಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ಮೇಯರ್ ಆಯ್ಕೆ ಪ್ರಕ್ರಿಯೆ ಸೇರಿದಂತೆ ಎಲ್ಲ ವ್ಯವಸ್ಥೆಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ಕಾಯ್ದೆಗೆ ತಿದ್ದುಪಡಿ ತರಬೇಕು. ಸರ್ಕಾರದ ಈ ಕಾರ್ಯಕ್ಕೆ ಸಂಪೂರ್ಣ ಬೆಂಬಲ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರ ಬಿಬಿಎಂಪಿ ಚುನಾವಣೆ ಮುಂದೂಡುವ ಸಾಧ್ಯತೆಯ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ ಎನ್ನಲಾಗುತ್ತಿದೆ. ಚುನಾವಣೆ ಮುಂದೂಡುವುದಕ್ಕೆ ಆಕ್ಷೇಪ ಎತ್ತುವುದಕ್ಕಿಂತ ಸಮಗ್ರ ಕಾಯ್ದೆ ತಿದ್ದುಪಡಿಗೆ ಸಹಕಾರ ನೀಡುವ ಕುರಿತು ಅಭಿಪ್ರಾಯ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.