ETV Bharat / state

ಬೆಂಗಳೂರಲ್ಲಿ 50 ಚ.ಮೀ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ ಮಾರ್ಗಸೂಚಿ ರಚಿಸಿ: ಹೈಕೋರ್ಟ್ - ಬೆಂಗಳೂರಲ್ಲಿ ಕಟ್ಟಡ ನಿರ್ಮಾಣ

ಬೆಂಗಳೂರಲ್ಲಿ ಸಣ್ಣ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲು ಅಗತ್ಯ ಮಾರ್ಗಸೂಚಿಗಳನ್ನು ರಚಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Jan 12, 2024, 9:46 AM IST

ಬೆಂಗಳೂರು: ರಾಜಧಾನಿ ಬೆಂಗಳೂರಿನಂತಹ ಮಹಾನಗರಗಳಲ್ಲಿನ ಭೂಮಿಯ ಮೌಲ್ಯವನ್ನು ಪರಿಗಣಿಸಿದರೆ 50 ಚದರ ಮೀಟರ್‌ಗಿಂತಲೂ ಕಡಿಮೆ ಅಳತೆಯ ನಿವೇಶನ ಖರೀದಿಸುವುದು ಅನೇಕರ ಕನಸಾಗಿರುತ್ತದೆ. ಜನರು ಇಡೀ ಜೀವಮಾನದಲ್ಲಿ ಉಳಿಸಿದ ಹಣದೊಂದಿಗೆ ಸಾಲ ಮಾಡಿ ಭೂಮಿ ಖರೀದಿಸಲು ಮುಂದಾಗುತ್ತಾರೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಈ ರೀತಿಯ ಸಣ್ಣ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲು ಅಗತ್ಯ ಮಾರ್ಗಸೂಚಿಗಳನ್ನು ರಚನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೊಟ್ಟಿದೆ.

ಬಿಬಿಎಂಪಿ ಬೈ-ಲಾ 2003ರ 7.2ರ ಪ್ರಕಾರ, ಆರ್ಥಿಕ ದುರ್ಬಲ ವರ್ಗಗಳು(ಇಡಬ್ಲ್ಯೂಎಸ್), ಕಡಿಮೆ ಆದಾಯವಿರುವ ಗುಂಪುಗಳು(ಎಲ್‌ಐಜಿ), ಕೊಳಗೇರಿಗಳು ಸೇರಿದಂತೆ ಜನನಿಬಿಡ ಪ್ರದೇಶಗಳ ಪುನರ್‌ನಿರ್ಮಾಣ ಮತ್ತು ಕುಟುಂಬಗಳ ಬೇರ್ಪಡುವುದರಿಂದ ಎದುರಾಗುವ ಪ್ರಕರಣಗಳಲ್ಲಿ ಬೈ-ಲಾ ನಿಯಮಾ 7.2 ಪ್ರಕಾರ 50 ಚದರ ಮೀಟರ್‌ಗಿಂತಲೂ ಕಡಿಮೆ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲು ಅನುಮತಿ ಇರಲಿದ್ದು, ಈ ಸಂಬಂಧ ಅಗತ್ಯವಿರುವ ಮಾರ್ಗಸೂಚಿಗಳನ್ನು ರಚನೆ ಮಾಡಲು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಿದೆ.

50 ಚದರ ಮೀಟರ್ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ಅನುಮೋದನೆ ನಿರಾಕರಿಸಿದ್ದ ಬಿಬಿಎಂಪಿ ಕ್ರಮವನ್ನು ಪ್ರಶ್ನಿಸಿ ನಾಗರಾಜು ಮತ್ತು ಅನುಮೊದನೆ ಪಡೆಯದೆ ಕಟ್ಟಡ ನಿರ್ಮಾಣ ಮಾಡಿರುವ ಕಟ್ಟಡವನ್ನು ನೆಲಸಮಗೊಳಿಸಬೇಕು ಎಂದು ಕೋರಿ ಕುಮಾರಿ ಕುಸುಮಾ ಮತ್ತಿತರರು ಹೈಕೋರ್ಟ್​ಗೆ ಹಲವು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೊವಿಂದರಾಜು ಅವರಿದ್ದ ನ್ಯಾಯಪೀಠ, ಬಿಬಿಎಂಪಿ ವ್ಯಾಪ್ತಿಯಲ್ಲಿ 50 ಚದರ ಮೀಟರ್ (600 ಚದರಡಿ)ಗಿಂತಲೂ ಕಡಿಮೆ ನಿವೇಶನಗಳಲ್ಲಿ ವಾಣಿಜ್ಯ ಆಸ್ತಿಗಳು ಸೇರಿದಂತೆ ಕಟ್ಟಡ ಯೋಜನೆಗಳಿಗೆ ಅಗತ್ಯವಿರುವ ಮಾರ್ಗಸೂಚಿ ರಚನೆ ಮಾಡುವಂತೆ ಹೇಳಿದೆ. ಅಲ್ಲದೆ, ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಲು 2024ರ ಜನವರಿ 29ಕ್ಕೆ ನಿಗದಿಪಡಿಸಿದೆ.

ಬಿಬಿಎಂಪಿ ಬೈ-ಲಾದಂತೆ, ಖಾಸಗಿಯವರ ಮಾಲೀಕತ್ವದ ನಿವೇಶನಗಳಿಗೆ ಇದು ಅನ್ವಯಿಸುವುದಿಲ್ಲ. ಹೀಗಾಗಿ, 50 ಚದರ ಮೀಟರ್​ಗಿಂತಲೂ ಕಡಿಮೆ ಸುತ್ತಳತೆಯ ನಿವೇಶನಗಳಲ್ಲಿ ಕಟ್ಟಡ ಕಟ್ಟಲು ಅನುಮೋದನೆ ನೀಡುವುದಕ್ಕೆ ಅಡ್ಡಿಯಾಗುವುದಿಲ್ಲ. ಆದ್ದರಿಂದ ಹೇಗೆ ಮಾರ್ಗಸೂಚಿಗಳಿರಬೇಕು ಎಂಬುದರ ಕುರಿತು ನ್ಯಾಯಾಲಯ ನಿರ್ದೇಶನ ನೀಡಲು ಸಾಧ್ಯವಿಲ್ಲ. ಮಾರ್ಗಸೂಚಿಗಳು ಹೇಗಿರಬೇಕು ಎಂಬುದು ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟದ್ದು ಎಂದು ಪೀಠ ತಿಳಿಸಿತು.

ಕಡಿಮೆ ವಿಸ್ತೀರ್ಣವಿರುವ ಭೂ ಮಾಲೀಕರಿಗೆ ಮುಂದಿನ 6 ತಿಂಗಳಲ್ಲಿ ಬೈಲಾ ಅಥವಾ ನಗರಾಭಿವೃದ್ಧಿ ತರುವ ಮಾರ್ಗಸೂಚಿಗಳ ಅನುಗುಣವಾಗಿ ನಿರ್ಮಾಣ ಮಾಡಿದ್ದಲ್ಲಿ ಬಿಬಿಎಂಪಿ ಕಾಯಿದೆ ಸೆಕ್ಷನ್ 248ರ ಅಡಿಯಲ್ಲಿ ಅನುಮತಿಸಿ ನೀಡಬಹುದಾಗಿದೆ ಎಂದು ಪೀಠ ಹೇಳಿದೆ.

ಪ್ರಕರಣದ ಹಿನ್ನೆಲೆ: 2017ರಿಂದ 2023ರ ಅವಧಿಯಲ್ಲಿ ಬೆಂಗಳೂರಿನ ವಿವಿಧ ಭಾಗಗಳಲ್ಲಿ 50 ಚದರ ಮೀಟರ್‌ಗಿಂತಲೂ ಕಡಿಮೆ ವಿಸ್ತೀರ್ಣದ ನಿವೇಶನದಲ್ಲಿ ಮನೆಗಳನ್ನು ನಿರ್ಮಿಸಿದ್ದವರಿಗೆ ಬಿಬಿಎಂಪಿ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ನೀಡಲು ನಿರಾಕರಿಸಿತ್ತು. ಕಾನೂನುಬಾಹಿರವಾಗಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಅಂತಹ ಕಟ್ಟಡಗಳನ್ನು ನೆಲಸಮಗೊಳಿಸಲು ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಹಲವು ಸಾರ್ವಜನಿಕರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಿದ ಕೋರ್ಟ್, ಮಾರ್ಗಸೂಚಿಗಳ ರಚನೆ ಮಾಡುವಂತೆ ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

ಇದನ್ನೂ ಓದಿ: ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಕೇಂದ್ರಗಳನ್ನ ನಿರ್ಮಿಸಿದರೆ ಜನ ಎಲ್ಲಿಗೆ ಹೋಗಬೇಕು ?: ಹೈಕೋರ್ಟ್ ಪ್ರಶ್ನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.