ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ರಾಜ್ಯಸಭೆಗೆ ಕಳುಹಿಸಿದ್ದಾರೆ. ಅವರಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಎಂ.ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ವಿಧಾನಸೌಧದಲ್ಲಿ ಇಂದು ಸಂಜೆ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಂದ ಘೋಷಣಾ ಪತ್ರ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಹಾಗೂ ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ ಎಂದರು.
![Mallikarjun Karge statement on BJP](https://etvbharatimages.akamaized.net/etvbharat/prod-images/7589136_917_7589136_1591966196664.png)
ಹಿಂಬಾಗಿಲಿನ ಮೂಲಕ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆಯಾದವರು ಬಿಜೆಪಿಯಲ್ಲಿ ಯಾರಿದ್ದಾರೆ? ಬಿಜೆಪಿಯವರು ನಾನು ಮಾಡಿದಷ್ಟು ವರ್ಷ ರಾಜಕಾರಣ ಮಾಡಲಿ ನೋಡೋಣ ಎಂದು ತಿರುಗೇಟು ನೀಡಿದರು.
ಬಿಜೆಪಿ ಅವಕಾಶ ನೀಡುತ್ತದೋ ಏನೋ ನೋಡೋಣ. ಒಬ್ಬರ ಮೇಲೊಬ್ಬರು ರಾಜಕಾರಣ ಮಾಡುವುದು ಬೇಡ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಪ್ರತ್ಯುತ್ತರ ನೀಡಿದರು.