ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ರಾಜ್ಯವಷ್ಟೇ ಅಲ್ಲ, ರಾಷ್ಟ್ರ ಮಟ್ಟದಲ್ಲಿ ತಲ್ಲಣಗೊಳ್ಳುವಂತಹ ತೀರ್ಪನ್ನು ಸುಪ್ರೀಂಕೋರ್ಟ್ ಕೊಟ್ಟಿದೆ ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮೀಸಲಾತಿಗೂ ತಿದ್ದುಪಡಿ ತಂದು ಆಯಾ ರಾಜ್ಯಗಳಲ್ಲಿ ಸರ್ಕಾರದ ಶಕ್ತಿ ಬಳಸಿ ಅದನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದರು. ಎಲ್ಲಾ ರಾಜ್ಯದಲ್ಲಿ ಮೀಸಲಾತಿ ತೆಗೆಯಬೇಕು, ಸಂವಿಧಾನ ಬದಲಿಸಬೇಕೆನ್ನುವುದು ಬಿಜೆಪಿ ಸರ್ಕಾರದ ಹಂಬಲವಾಗಿದೆ ಎಂದು ಇದೇ ವೇಳೆ ಅವರು ಆರೋಪಿಸಿದರು.
ಸಂವಿಧಾನದಲ್ಲಿ ಮೀಸಲಾತಿ ಬಗ್ಗೆ ಅಚ್ಚುಕಟ್ಟಾಗಿ ಹೇಳಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಮೀಸಲಾತಿ ಬಗ್ಗೆ ನೀಡಿರುವ ತೀರ್ಪು ಆಘಾತಕಾರಿಯಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಂಸದ ಎನ್. ಚಂದ್ರಪ್ಪ, ಕಾಂಗ್ರೆಸ್ ಮುಖಂಡರಾದ ವಿ.ಆರ್. ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.