ETV Bharat / state

ರಾಷ್ಟ್ರಪತಿ ಚುನಾವಣೆ ಚರ್ಚೆಗೆ ಮಮತಾ ಕರೆ: ನಾಳೆ ದೆಹಲಿಗೆ ತೆರಳಲಿರುವ ಹೆಚ್​ಡಿಡಿ, ಹೆಚ್​ಡಿಕೆ

author img

By

Published : Jun 14, 2022, 10:37 PM IST

ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ನಾಳೆ ದೆಹಲಿಯಲ್ಲಿ ಸಭೆ ಆಯೋಜಿಸಿದ್ದಾರೆ. ಈ ಸಭೆಯಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ.

Meeting led by Mamata Banerjee
ರಾಷ್ಟ್ರಪತಿ ಚುನಾವಣೆ ಚರ್ಚೆಗೆ ಮಮತಾ ಕರೆ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಲುವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಳೆ (ಬುಧವಾರ) ಕರೆದಿರುವ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ. ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, “ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲು ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಹಾಗೂ ನನಗೆ ವೈಯಕ್ತಿಕವಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಹೀಗಾಗಿ ನಾವಿಬ್ಬರೂ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ” ಎಂದಿದ್ದಾರೆ.

ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಎಲ್ಲ ಪ್ರಾದೇಶಿಕ ಪಕ್ಷಗಳ ಉದ್ದೇಶ. ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಪ್ರಯತ್ನವನ್ನು ಆರಂಭಿಸಿದ್ದಾರೆ. ಸುಮಾರು ಇಪ್ಪತ್ತೆರಡಕ್ಕೂ ಹೆಚ್ಚು ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ. ಆದರೆ, ಜೆಡಿಎಸ್‌ ಪಕ್ಷದಿಂದ ಇಬ್ಬರು ನಾಯಕರನ್ನು ಅವರು ವೈಯಕ್ತಿವಾಗಿ ಆಹ್ವಾನಿಸಿದ್ದಾರೆಂದು ತಿಳಿಸಿದ್ದಾರೆ. ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್​ನಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಈ ಸಭೆ ಕರೆಯಲಾಗಿದೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಚರ್ಚೆಗೆ ಮಮತಾ ಪತ್ರ: ಇಕ್ಕಟ್ಟಿನಲ್ಲಿ ಮಹಾ ಸಿಎಂ ಉದ್ಧವ್ ಠಾಕ್ರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.