ETV Bharat / state

ಭವಾನಿಪುರ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು ಖಚಿತ: ಹೆಚ್​ಡಿಕೆ ವಿಶ್ವಾಸ - ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವತಃ ಆ ಪಕ್ಷದ ನಾಯಕ ರಾಜೀವ್ ಬ್ಯಾನರ್ಜಿ ಹೇಳಿರುವುದರಲ್ಲಿ ಅಚ್ಚರಿಯೇನೂ ಇಲ್ಲ. ಇದು ಅಪ್ಪಟ ಸತ್ಯ ಎಂದು ಮಾಜಿ ಸಿಎಂ ಹೆಚ್​ಡಿಕೆ ಟ್ವೀಟ್​ ಮಾಡಿದ್ದಾರೆ.

mamata-banerjee-will-win-in-by-election-h-d-kumaraswamy
ಭವಾನಿಪುರ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಭರ್ಜರಿ ಗೆಲುವು ಖಚಿತ : ಹೆಚ್​ಡಿಕೆ ವಿಶ್ವಾಸ
author img

By

Published : Sep 22, 2021, 11:54 AM IST

ಬೆಂಗಳೂರು: ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರಿ ಅಂತರದ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿ ತನ್ನ ಅಭ್ಯರ್ಥಿ ಕಣಕ್ಕಿಳಿಸದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವತಃ ಆ ಪಕ್ಷದ ನಾಯಕ ರಾಜೀವ್ ಬ್ಯಾನರ್ಜಿ ಹೇಳಿರುವುದರಲ್ಲಿ ಅಚ್ಚರಿಯೇನು ಇಲ್ಲ. ಇದು ಅಪ್ಪಟ ಸತ್ಯ. ಮಮತಾ ಬ್ಯಾನರ್ಜಿ ಅವರು ಕೇವಲ ನಾಯಕಿಯಲ್ಲ, ಸಮಸ್ತ ಬಂಗಾಳಿಗರ ನಾಡಿಮಿಡಿತ. ಈ ಸತ್ಯವನ್ನು ಅರಿಯುವಲ್ಲಿ ಬಿಜೆಪಿ ಸೋತಿದೆ ಎಂದಿದ್ದಾರೆ.

  • ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವತಃ ಆ ಪಕ್ಷದ ನಾಯಕ ರಾಜೀವ್ ಬ್ಯಾನರ್ಜಿ ಹೇಳಿರುವುದರಲ್ಲಿ ಅಚ್ಚರಿಯೇನು ಇಲ್ಲ. ಇದು ಅಪ್ಪಟ ಸತ್ಯ. ಮಮತಾ ಬ್ಯಾನರ್ಜಿ ಅವರು ಕೇವಲ ನಾಯಕಿಯಲ್ಲ, ಸಮಸ್ತ ಬಂಗಾಳಿಗರ ನಾಡಿಮಿಡಿತ. ಈ ಸತ್ಯವನ್ನು ಅರಿಯುವಲ್ಲಿ ಬಿಜೆಪಿ ಸೋತಿದೆ.2/5

    — H D Kumaraswamy (@hd_kumaraswamy) September 22, 2021 " class="align-text-top noRightClick twitterSection" data=" ">

ಇತಿಹಾಸ ಸೃಷ್ಟಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಮತಾ ಅವರು ಕಳೆದ ಏಪ್ರಿಲ್‌ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 294 ವಿಧಾನಸಭೆ ಕ್ಷೇತ್ರಗಳ ಪೈಕಿ 214 ಸ್ಥಾನಗಳನ್ನು ಜಯಿಸಿದ್ದರು. ಆಗಲೇ ಅವರು ಚರಿತ್ರೆ ಬರೆದಿದ್ದರು. ಈಗ ಹೊಸ ಚರಿತ್ರೆ ಸೃಷ್ಟಿಗೆ ಅಣಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಜನರ ಬಾವನೆಗಳನ್ನು, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಂಡು ಗೌರವಿಸಬೇಕು. 2021ರ ಚುನಾವಣೆಯಲ್ಲಿ ಬಂಗಾಳದ ಮಹಾಜನತೆ ಮಮತಾ ಅವರಿಗೆ ಸ್ಪಷ್ಟ ಜನಾದೇಶ ನೀಡಿದ್ದಾಗಿದೆ.

ಈ ಉಪ ಚುನಾವಣೆಯಲ್ಲಿ ಯಾವ ಪಕ್ಷವೂ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಅವಿರೋಧ ಆಯ್ಕೆಗೆ ಸಹಕರಿಸಬೇಕಿತ್ತು. ಬಿಜೆಪಿ ತನ್ನ ಸಂಕುಚಿತ ಮನೋಭಾವ ತೊರೆದು ದೊಡ್ಡತನ ಪ್ರದರ್ಶಿಸಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಪ್ರಜಾಬಲಕ್ಕಿಂತ ದೊಡ್ಡದು ಬೇರೊಂದಿಲ್ಲ ಎಂದಿದ್ದಾರೆ.

ಅನಂತಕುಮಾರ್ ಜನ್ಮದಿನಕ್ಕೆ ಶುಭಾಶಯ ಕೋರಿದ ಹೆಚ್​ಡಿಕೆ :

ಕೇಂದ್ರದ ಮಾಜಿ ಸಚಿವ ದಿ. ಅನಂತಕುಮಾರ್ ಜನ್ಮದಿನಕ್ಕೆ ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ. ಸದಾ ಹಸನ್ಮುಖಿ ಮತ್ತು ಸ್ನೇಹಜೀವಿಯಾಗಿದ್ದ ದಿವಂಗತ ಅನಂತ ಕುಮಾರ್‌ ಅವರಿಗೆ ಜನ್ಮದಿನದ ನಿಮಿತ್ತ ನನ್ನ ಪ್ರಣಾಮಗಳು.

ಕರ್ನಾಟಕ ಮತ್ತು ನವದೆಹಲಿಯ ನಡುವೆ ಸೇತುವೆಯಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ ಅವರು ಭೌತಿಕವಾಗಿ ನಮ್ಮ ಜತೆ ಇಲ್ಲದಿದ್ದರೂ ಅವರ ನೆನಪುಗಳು ಹಾಗೂ ಅವರ ಸಾಧನೆ ಮತ್ತು ಸೇವೆ ನಮಗೆ ಸದಾ ಸ್ಫೂರ್ತಿ. ಭಾರತದ ಸಂಸದೀಯ ಇತಿಹಾಸದಲ್ಲಿ ಅನಂತ ಕುಮಾರ್‌ ಅವರು ಅಜರಾಮರ ಎಂದು ಅವರು ಹೇಳಿದ್ದಾರೆ.

  • ಕರ್ನಾಟಕ ಮತ್ತು ನವದೆಹಲಿಯ ನಡುವೆ ಸೇತುವೆಯಾಗಿ ರಾಜ್ಯಕ್ಕೆ ಎಣೆಇಲ್ಲದ ಸೇವೆ ಮಾಡಿದ ಅವರು ಭೌತಿಕವಾಗಿ ನಮ್ಮ ಜತೆ ಇಲ್ಲದಿದ್ದರೂ ಅವರ ನೆನಪುಗಳು ಹಾಗೂ ಅವರ ಸಾಧನೆ ಮತ್ತು ಸೇವೆ ನಮಗೆ ಸದಾ ಸ್ಫೂರ್ತಿ. ಭಾರತದ ಸಂಸದೀಯ ಇತಿಹಾಸದಲ್ಲಿ ಅನಂತ ಕುಮಾರ್‌ ಅವರು ಅಜರಾಮರ.
    2/2

ETV Bharat Logo

Copyright © 2025 Ushodaya Enterprises Pvt. Ltd., All Rights Reserved.