ಬೆಂಗಳೂರು : ಲಾಕ್ ಡೌನ್ ಸಮಯದಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧನ ಮಾಡುವಲ್ಲಿ ಉತ್ತರ ವಿಭಾಗ ಪೊಲೀಸರು ಯಶಸ್ವಿಯಾಗಿದ್ದಾರೆ.
ಮುರುಳೀಧರ್ ಎಂಬುವವರು ಆರ್.ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದು, ಲಾಕ್ ಡೌನ್ ಸಮಯದಲ್ಲಿ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಹಾಸನಕ್ಕೆ ತೆರಳಿದ್ದರು. ಆದರೆ, ಇತ್ತೀಚೆಗೆ ವಾಪಸ್ ಬಂದಾಗ ಮನೆಯ ಬಾಗಿಲು ಒಡೆದು ಬೆಡ್ ರೂಮ್ನ ಬೀರುವಿನಲ್ಲಿದ್ದ ಚಿನ್ನಾಭರಣ ನಗದು ಕದ್ದೊಯ್ದಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಸಿಪಿ ರೀನಾ ಸುವರ್ಣ ಅವರ ಪೊಲೀಸರ ತಂಡ ಕಾರ್ಯಾಚರಣೆ ಮಾಡಿ ಪ್ರಕರಣದ ಆರೋಪಿ ಸಂತೋಷ್ ಎಂಬಾತನನ್ನ ಬಂಧಿಸಿದ್ದಾರೆ.
ಸದ್ಯ ಬಂಧಿತ ಆರೋಪಿಯಿಂದ ಸುಮಾರು 14 ಲಕ್ಷ ನಗದು, ಬೆಲೆ ಬಾಳುವ 350.03 ಗ್ರಾಂ ತೂಕದ ಚಿನ್ನಾಭರಣ ಮತ್ತು ಎಲ್ ಇಡಿ ಟಿವಿ ವಶಪಡಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.