ಬೆಂಗಳೂರು: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಅನ್ನಪೂರ್ಣೇಶ್ವರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಾಗರಬಾವಿ 2ನೇ ಹಂತದ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಸುಂಕದಕಟ್ಟೆಯ ರಘು (27) ಎಂಬಾತನನ್ನು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದ್ದು, ಈತನಿಂದ 1 ಕೆಜಿ 700 ಗ್ರಾಂ ತೂಕದ ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ.
ಆರೋಪಿಯು ತೆಲಂಗಾಣದ ವಜ್ರಕಂಟೆ ಡ್ರಗ್ ಪೆಡ್ಲರ್‌ನಿಂದ ಗಾಂಜಾ ಖರೀದಿಸಿ, ಬೆಂಗಳೂರಿನ ನಾಗರಬಾವಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಜನರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ವಿಚಾರಣೆ ವೇಳೆ ತಿಳಿದುಬಂದಿದೆ.
ಓದಿ: ಸಿಡಿ ಲೇಡಿ ಪರ ಬ್ಯಾಟ್ ಮಾಡಿದ ಸಂಸದ ಡಿಕೆ ಸುರೇಶ್.. ಏನ್ ಹೇಳಿದ್ರು!?