ಬೆಂಗಳೂರು: ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಅಪರಿಚಿತರು ಲಾಂಗು-ಮಚ್ಚನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಶಾಂತಿನಗರ ರುದ್ರಭೂಮಿ ಬಳಿ ನಡೆದಿದೆ. ದಂಪತಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಬಂದ ಅಪರಿಚಿತರು ಮನಸೋಯಿಚ್ಛೆ ಹಲ್ಲೆ ಮಾಡಿದ್ದಾರೆ.
ಬೈಕ್ ಸವಾರ ಅರುಣ್ (31)ಗೆ ಪತ್ನಿ ಮುಂದೆಯೇ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಬಳಿಕ ಅಶೋಕನಗರ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಪೊಲೀಸ್ ವಾಹನದಲ್ಲೇ ಗಾಯಾಳುವನ್ನು ಫಿಲೋಮಿನಾ ಆಸ್ಪತ್ರೆಗೆ ರವಾನಿಸಲಾಗಿದೆ.