ಬೆಂಗಳೂರು: ಅಕ್ರಮ ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಹೊಸಕೋಟೆಯ ದಾಸರಹಳ್ಳಿ ನಿವಾಸಿ ಲಕ್ಷ್ಮಯ್ಯ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಹೊಸಕೋಟೆ, ಆನೇಕಲ್, ಸಿಲಿಕಾನ್ ಸಿಟಿಯ ಬಳಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಯುವಕರನ್ನು ಟಾರ್ಗೆಟ್ ಮಾಡಿ ಗಾಂಜಾ ಮಾರಾಟ ಮಾಡುತ್ತಿದ್ದನಂತೆ.
ಹೀಗಾಗಿ ಗಾಂಜಾ ಮಾರಾಟ ಕೇಸ್ನಲ್ಲಿ ಹೊಸಕೋಟೆ ಪೊಲೀಸರು ಬಂಧಿಸಿ ಆಗಸ್ಟ್ 18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಸದ್ಯ ಮಾನಸಿಕ ಖಿನ್ನತೆಗೆ ಒಳಗಾಗಿ ಆರೋಪಿ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಹಾಗೆಯೇ ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ. ಚನ್ನಣ್ಣನವರ್ ಮಾಹಿತಿ ಕಲೆಹಾಕಿದ್ದಾರೆ.