ಬೆಂಗಳೂರು: ಸಿಗರೇಟ್ ಹಚ್ಚುವಾಗ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೊಹಮ್ಮದ್ (64) ಮೃತ ವ್ಯಕ್ತಿ.
ಮಾರ್ಚ್ 19ರಂದು ಚಂದ್ರಾ ಲೇಔಟ್ ವ್ಯಾಪ್ತಿಯ ಗಂಗೊಂಡನಹಳ್ಳಿಯ ಬೇಕರಿಯೊಂದರಲ್ಲಿ ಸಿಲಿಂಡರ್ ಸ್ಫೋಟವಾಗಿತ್ತು. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಮ್ಮದ್, ಟೀ ಮಾಡಲು ಗ್ಯಾಸ್ ಆನ್ ಮಾಡಿ ಅದನ್ನು ಆಫ್ ಮಾಡಲು ಮರೆತಿದ್ದರು. ಬಳಿಕ ಸಿಗರೇಟ್ ಹಚ್ಚುವಾಗ ಬೆಂಕಿ ಸೋರಿಕೆಯಾಗುತ್ತಿದ್ದ ಗ್ಯಾಸ್ ಸಿಲಿಂಡರ್‌ಗೆ ತಗುಲಿ ಸ್ಫೋಟಗೊಂಡಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರವು ಇಂಧನ ಬೆಲೆಗಳನ್ನು ಅಭಿವೃದ್ಧಿ ಮಾಡುತ್ತಿದೆ : ರಾಹುಲ್ ವ್ಯಂಗ್ಯ
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.