ರಾಮನಗರ: ಮರಳು ತುಂಬಿದ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಉರಗಹಳ್ಳಿ ಕೇತೋಹಳ್ಳಿ ರಸ್ತೆಯ ಎಂ.ಆರ್. ಹಾಲೋ ಬ್ರಿಕ್ಸ್ ಎದುರು ಸಂಭವಿಸಿದೆ.
ಹುಲಿಕೆರೆ ನಿವಾಸಿ ಗೌತಮ್ ಗೌಡ (23) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿ. ಚಾಲಕನ ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.
ಮರಳು ತುಂಬಿಸಿಕೊಂಡು ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್ ಚಾಲನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ಮೇಲೆ ಮರಳು ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಮೃತಟ್ಟಿದ್ದಾನೆ.
ಬಿಡದಿ ಪೊಲೀಸ್ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.