ಬೆಂಗಳೂರು: ದ್ವಿಚಕ್ರ ವಾಹನ ಸವಾರನ ನಿರ್ಲಕ್ಷ್ಯಕ್ಕೆ ವೃದ್ಧನೋರ್ವ ಬಲಿಯಾಗಿದ್ದಾನೆ. ಬೆಂಗಳೂರಿನ ಶಾಂತಿನಗರದ ಬಳಿ ಕೆಲದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಸುಬ್ರಮಣಿ ಸಿ ಮೃತ ವ್ಯಕ್ತಿ.ಅಪಘಾತದಲ್ಲಿ ವೃದ್ಧನ ತಲೆ ಹಾಗೂ ಕೈ ಕಾಲುಗಳಿಗೆ ತೀವ್ರವಾದ ಪೆಟ್ಟು ಬಿದ್ದಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದ್ವಿಚಕ್ರ ವಾಹನ ಸವಾರ ಶಾಂತಿನಗರ ಬಸ್ ನಿಲ್ದಾಣದ ಕಡೆಯಿಂದ ರಿಚ್ಮಂಡ್ ವೃತ್ತದ ಕಡೆಗೆ ನಿರ್ಲಕ್ಷತೆಯಿಂದ ವೇಗವಾಗಿ ಚಾಲನೆ ಮಾಡಿಕೊಂಡು ಬರುತ್ತಿದ್ದ. ಅ ಸಮಯದಲ್ಲಿ ಅದೇ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಕೇಂದ್ರ ಕಚೇರಿ ಕಡೆಯಿಂದ ಭಾರತ್ ಬ್ಯಾಂಕ್ ಕಡೆಗೆ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ವೃದ್ಧ ಸಾವಿಗೀಡಾಗಿದ್ದಾನೆ.