ETV Bharat / state

ಬೆಂಗಳೂರಿನಲ್ಲಿ ಆಕ್ಸಿಜನ್ ಸಿಲಿಂಡರ್ ಬ್ಲಾಸ್ಟ್: ಪತಿ ಸಾವು, ಪತ್ನಿಗೆ ಗಾಯ - ಆಕ್ಸಿಜನ್‌ ಸಿಲಿಂಡರ್

ಹಲಸೂರು ಗೇಟ್​ ಪೊಲೀಸ್ ಠಾಣೆ ವ್ಯಾಪ್ತಿಯ ನಗರ್ತಪೇಟೆಯ ಜ್ಯುವೆಲ್ಲರಿ ಶಾಪ್​ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟಗೊಂಡಿದೆ.

ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ
ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ
author img

By

Published : Jun 30, 2023, 4:07 PM IST

Updated : Jun 30, 2023, 9:17 PM IST

ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ

ಬೆಂಗಳೂರು: ಜ್ಯೂವೆಲ್ಲರಿ ಶಾಪ್​ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಅಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ಗುರುವಾರ ನಡೆದಿದೆ. ಮಹಾರಾಷ್ಟ್ರ ಮೂಲದ ವಿಷ್ಣು ಸಾವಂತ್ ಮೃತ ವ್ಯಕ್ತಿ. ಇವರ ಪತ್ನಿ ವೈಜಯಂತಿ ಎಂಬವರಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಧ್ಯಾಹ್ನ ಅವಘಡ ಸಂಭವಿಸಿದೆ. ಅಂಬಿಕಾ ರಿಫೈನರಿ ಶಾಪ್​ನಲ್ಲಿ‌ ಕೆಲಸ ಮಾಡುತ್ತಿದ್ದ ನರೇಂದ್ರ ಸೋನಿ ಎಂಬವರು ನೀಡಿದ ದೂರಿನ‌ ಮೇರೆಗೆ ಶಾಪ್ ಮಾಲೀಕರಾದ ರಮೇಶ್ ಕೊಠಾರಿ, ಮಹೇಶ್ ಕೊಠಾರಿ, ಕಟ್ಟಡ ಮಾಲೀಕರು ಸೇರಿ‌ ಒಟ್ಟು ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಳೆದೊಂದು ವರ್ಷಗಳಿಂದ ನಗರ್ತಪೇಟೆಯ ಅಂಬಿಕಾ ರಿಫೈನರಿ ಶಾಪ್​ನಲ್ಲಿ‌ ದಂಪತಿ ಚಿನ್ನಾಭರಣ ಕರಗಿಸುವ ಕೆಲಸ ಮಾಡಿಕೊಂಡು ಬಾಡಿಗೆ ಮನೆವೊಂದರಲ್ಲಿ ವಾಸವಾಗಿದ್ದರು. ನಿನ್ನೆ ಮಧ್ಯಾಹ್ನ ಹೆಂಡತಿ ಊಟದ ಬಾಕ್ಸ್ ತೆಗೆದುಕೊಂಡು ಬಂದಾಗ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಪಕ್ಕದಲ್ಲೇ ಇದ್ದ ದಂಪತಿ ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ವಿಷ್ಣು ಸಾವನ್ನಪ್ಪಿದ್ದಾರೆ. ಪತ್ನಿ‌ಗೆ ಸುಟ್ಟ ಗಾಯವಾಗಿರುವುದರಿಂದ ಚಿಕಿತ್ಸೆ ಪಡೆಯುತ್ತಿರುವುದಾಗಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ತಿಳಿಸಿದ್ದಾರೆ.

ಚಿನ್ನ ಕರಗಿಸಲು ಎಲ್​ಪಿಜಿ ಸಿಲಿಂಡರ್ ಜೊತೆ ಆಕ್ಸಿಜನ್ ಸಿಲಿಂಡರ್ ಬಳಸುತ್ತಾರೆ. ನಿನ್ನೆ ಸಿಲಿಂಡರ್ ಬಳಸಿ ಕೆಲಸ ಮಾಡುವಾಗ ದುರಂತ ಸಂಭವಿಸಿದೆ.‌ ಆಕ್ಸಿಜನ್‌ ಸಿಲಿಂಡರ್ ಬಳಸಲು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯಲಾಗಿದೆಯೇ? ಎಂಬುದರ ಬಗ್ಗೆ‌ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಯಚೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಲ್ಲಿನ ನೇತಾಜಿ ನಗರ ಬಡಾವಣೆಯ ಈಶ್ವರ ದೇವಾಲಯದ ಸಮೀಪವಿರುವ ಖಾಜಾ ಬೀ ಎನ್ನುವವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಮಹಿಳೆಯರು ಗಾಯಗೊಂಡಿರುವ ಘಟನೆ (ಏಪ್ರಿಲ್​ 7-2023)ರ ಗುರುವಾರ ಮಧ್ಯಾಹ್ನ ಸಂಭವಿಸಿತ್ತು. ಸ್ಫೋಟದ ರಭಸಕ್ಕೆ ಮನೆಯ ಬಾಗಿಲ ಬಳಿ ಇದ್ದ ಮಹಿಳೆ ಹೊರ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಮಧ್ಯಾಹ್ನ ಖಾಜಾ ಬೀ ಅಡುಗೆ ಅನಿಲ ಬಳಕೆ ಮಾಡಲು ಹೋದಾಗ ಏಕಾಏಕಿ ಸಿಲಿಂಡರ್ ಬ್ಲಾಸ್ಟ್ ಆಗಿತ್ತು. ಮನೆ ಕೆಲಸ ಮಾಡಲು ಬಂದ ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿದ್ದರು. ಸಿಲಿಂಡರ್ ಬ್ಲಾಸ್ಟ್​ನಿಂದಾಗಿ ಮನೆಯ ಬಾಗಿಲು ಮುರಿದ ತುಣುಕುಗಳು ಹಾಗೂ ಮನೆಯೊಳಗಿದ್ದ ಮಹಿಳೆ ಹೊರಗಡೆ ರಸ್ತೆಯ ಮೇಲೆ ಬಂದು ಬಿದ್ದಿರುವ ಭಯಾನಕ ದೃಶ್ಯ ಬಡಾವಣೆಯಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ತೀವ್ರವಾದ ಸ್ಫೋಟದಿಂದಾಗಿ ಸುತ್ತಮುತ್ತಲಿನ ನಿವಾಸಿಗಳಲ್ಲಿ ಕೆಲಕಾಲ ಆತಂಕ ಉಂಟಾಗಿತ್ತು. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಒಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಲಾಗಿತ್ತು. ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಇದನ್ನೂ ಓದಿ: ರಾಯಚೂರಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೂವರು ಮಹಿಳೆಯರಿಗೆ ಗಾಯ

Last Updated : Jun 30, 2023, 9:17 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.