ಬೆಂಗಳೂರು : ಮಹಾಮಾರಿ ಕೊರೊನಾಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಲಿಯಾಗಿದೆ. ಶಂಕರಮಠ ವಾರ್ಡ್ನ, ಕುರುಬರಹಳ್ಳಿ ನಿವಾಸಿ 60 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ.
ಇವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಕಳೆದ ನಾಲ್ಕು ದಿನಗಳಿಂದ ಗೊರಗುಂಟೆ ಪಾಳ್ಯದ ಪೀಪಲ್ ಟ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಶಂಕರಮಠ ವಾರ್ಡ್ನ ಬಿಬಿಎಂಪಿ ಸದಸ್ಯ ಎಂ.ಶಿವರಾಜು ಅವರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ. ಅಲ್ಲದೆ ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬಿ, ನಂತರ ಸುಮನಹಳ್ಳಿ ಚಿತಾಗಾರದಲ್ಲಿ ಗೌರವಯುತವಾಗಿ ಶವ ಸಂಸ್ಕಾರ ಕಾರ್ಯ ಮಾಡಿಸಿದ್ದಾರೆ.