ETV Bharat / state

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮಗನನ್ನೇ ಕೊಂದು ಹಾಕಿದ ಚಿಕ್ಕಪ್ಪ!

ತಡರಾತ್ರಿ ಬೆಂಗಳೂರಿನಲ್ಲಿ ಭೀಕರ ಕೊಲೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಅಣ್ಣನ ಮಗನನ್ನೇ ಚಿಕ್ಕಪ್ಪ ಕೊಲೆ ಮಾಡಿರುವ ಘಟನೆ ನಡೆದಿದೆ.

Man murder in Bengaluru  Bengaluru crime news  ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ  ತಡರಾತ್ರಿ ಕೆಂಗೇರಿ ಉಪನಗರದಲ್ಲಿ ಘಟನೆ  ಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ  ಕೊಲೆ ಮಾಡಿರುವ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ  ಕೊಚ್ಚಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ  ಕೆಂಗೇರಿ ಉಪನಗರದ ಹೊಯ್ಸಳ ಸರ್ಕಲ್  ಕೆಂಗೇರಿ ಠಾಣೆಯಲ್ಲಿ ಪ್ರಕರಣ
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
author img

By

Published : Jun 2, 2023, 12:26 PM IST

Updated : Jun 2, 2023, 1:02 PM IST

ಬೆಂಗಳೂರು : ಕಳೆದ ಎರಡ್ಮೂರು ದಿನಗಳಿಂದ ರಾಜ್ಯದ ರಾಜಧಾನಿಯಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆ ರಾತ್ರಿ ನಗರದಲ್ಲಿ ಮತ್ತೊಂದು ಹತ್ಯೆಯಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಗನನ್ನೇ ಚಿಕ್ಕಪ್ಪ ಕೊಲೆ ಮಾಡಿರುವ ಘಟನೆ ನಡೆದಿದೆ. ಕೆಂಗೇರಿ ಉಪನಗರದ ಹೊಯ್ಸಳ ಸರ್ಕಲ್ ಸಮೀಪದ ಹ್ಯಾಪಿ ಡೇ ಬಾರ್ ಬಳಿ ಘಟನೆ ನಡೆದಿದೆ. ಕೆಂಗೇರಿಯ ಗಾಂಧಿನಗರ ನಿವಾಸಿ ನವೀನ್ (25) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕಂಠಪೂರ್ತಿ ಕುಡಿದು, ಹಳೆ ವೈಷಮ್ಯದ ವಿಚಾರಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆಗೊಳಗಾಗಿದ್ದ ನವೀನ್ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನವೀನ್ ಚಿಕ್ಕಪ್ಪ ಕುಮಾರ್ ಹಾಗೂ ಆತನ ಸಹಚರರಾದ ರಮೇಶ್, ಗುರುಪ್ರಸಾದ್ ಎಂಬಾತನಿಂದ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಕುಮಾರ್​ ಕಾಲಿಗೂ ಗಾಯವಾಗಿದ್ದು, ಪರಾರಿಯಾಗಲು ಯತ್ನಿಸಿರುವುದು ಗೊತ್ತಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಕೆಂಗೇರಿ ಪೊಲೀಸರು ಘಟನೆ ನಡೆದ ಸ್ವಲ್ಪ ದೂರದಲ್ಲಿ ಗಾಯಗೊಂಡ ಪ್ರಮುಖ ಆರೋಪಿ ಕುಮಾರ್​ನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ನವೀನ್​ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಹಂತಕರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ‌.

ಇದನ್ನೂ ಓದಿ: ಮದುವೆಗೆ ನಾಲ್ಕೇ ದಿನ ಬಾಕಿ ಇತ್ತು: ಹುಬ್ಬಳ್ಳಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ: ಕೈ, ಕಾಲು, ರುಂಡ ಕತ್ತರಿಸಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬನ್ನೇರುಘಟ್ಟದ ಜನತಾ ಕಾಲೊನಿಯಲ್ಲಿ ನಡೆದಿದೆ. ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ವಾಸಿ ಜನತಾ ಕಾಲೊನಿಯ ಗೀತಮ್ಮ (53) ಮೃತರು. ಮನೆ ಸಮೀಪವೇ ಕೈ ಕಾಲು ರುಂಡ ಕತ್ತರಿಸಿ ದೇಹ ಎಸೆದಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ ಮಹಿಳೆಯ ಹತ್ಯೆ ಮಾಡಿದ್ದು, ಬುಧವಾರದಂದು ನಗ್ನ ಸ್ಥಿತಿಯಲ್ಲಿ ಕೊಳೆತ ಶವ ಪತ್ತೆಯಾಗಿದೆ.

ಇತ್ತೀಚೆಗೆ ಕಾರು ಚಾಲಕನೊಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆಗೈದು ತಲೆ ಮೇಲೆ ಸೈಜುಗಲ್ಲು ಎತ್ತಿ ಹಾಕಿ ಬರ್ಬರ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಏಳು ಮಂದಿ ಆರೋಪಿಗಳನ್ನು ನಂದಿನಿ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತನ ಕೊಲೆ: ಕಾಂಗ್ರೆಸ್ ಕಾರ್ಯಕರ್ತನ ತಲೆ ಮೇಲೆ ಸೈಜುಗಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ನಂದಿನಿ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಜ, ಸ್ಪಾಟ್ ನಾಗ, ಗೋಪಿ ಸೇರಿ ಆರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಮೇ 24 ರ ರಾತ್ರಿ 11 ಗಂಟೆಯ ಸುಮಾರಿಗೆ ಲಗ್ಗೆರೆ ಬಳಿಯ ಚೌಡೇಶ್ವರಿ ನಗರದ ಹಳ್ಳಿ ರುಚಿ ಹೊಟೇಲ್ ಮುಂಭಾಗದಲ್ಲಿ ಕೊಲೆ ನಡೆದಿತ್ತು. ರವಿ ಅಲಿಯಾಸ್ ಮತ್ತಿ ರವಿ (42) ಎಂಬಾತನನ್ನು ಹತ್ಯೆಗೈಯ್ಯಲಾಗಿತ್ತು.

ಹುಬ್ಬಳ್ಳಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ: ಹಸೆಮಣೆ ಏರಬೇಕಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಬೂದಪ್ಪ ನವಲೂರ (28) ಕೊಲೆೆಯಾದ ವ್ಯಕ್ತಿ. ದುಷ್ಕರ್ಮಿಗಳು ತೋಟದ ಮನೆಯಲ್ಲಿ ಕಣ್ಣಿಗೆ ಕಾರದ ಪುಡಿ ಎರಚಿ ಬಳಿಕ ಕತ್ತು ಹಿಸುಕಿ ಕೊಂದಿದ್ದಾರೆ ಎನ್ನಲಾಗಿದೆ. ತಾವರಗೇರೆ ಗ್ರಾಮದ ಯುವತಿ ಜತೆ ಮದುವೆ ನಿಶ್ಚಯವಾಗಿತ್ತು. ಜೂನ್ 7 ರಂದು ಮದುವೆ ನಡೆಯಬೇಕಿತ್ತು. ಗುರುವಾರ ಮಧ್ಯರಾತ್ರಿ ಕೊಲೆ ನಡೆದಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

Last Updated : Jun 2, 2023, 1:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.