ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದವನ ಮೇಲೆ ಮತ್ತೆ ಕ್ಯಾಂಟರ್ ಹರಿದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕಲ್ಯಾಣ ನಗರ ಮುಖ್ಯ ರಸ್ತೆಯಲ್ಲಿ ನಿನ್ನೆ(ಶುಕ್ರವಾರ) ರಾತ್ರಿ 11 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ.
ಮೃತನನ್ನು ಬಾಪಿ ಕಮಾರ್ ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದರು. ಬಳಿಕ ಕ್ಯಾಂಟರ್ ವಾಹನ ಮತ್ತೆ ಈತನ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ಘಟನೆಯ ದೃಶ್ಯದ ಹಿಂದೆ ಬರುತ್ತಿದ್ದ ಕಾರಿನ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಕುರಿತು ಬಾಣಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಟ್ ಅಂಡ್ ರನ್ ಕೇಸ್ ದಾಖಲಿಸಿಕೊಂಡ ಪೊಲೀಸರು ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಓವರ್ ಟೇಕ್ ಭರದಲ್ಲಿ ಬಸ್ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು