ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇಂದು ಮಾಜಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಇಂದು ಸಿದ್ದರಾಮಯ್ಯ ನಿವಾಸ ಕಾವೇರಿಗೆ ಆಗಮಿಸಿದ ಸಂಸದೆ ಸುಮಲತಾ ಅಂಬರೀಶ್ ವಿಶ್ರಾಂತಿ ಪಡೆಯುತ್ತಿರುವ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ವಿಚಾರವಾಗಿ ಭೇಟಿಯಾಗಿದ್ದ ಸುಮಲತಾ ಅವರು ಇಂದು ಸಿದ್ದರಾಮಯ್ಯನವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಾರೆ.