ETV Bharat / state

ಮಂಗಳೂರು ಏರ್ಪೋರ್ಟ್ ದುರಂತ : ಏರ್ ಇಂಡಿಯಾ ವಿರುದ್ಧದ ದೂರು ರದ್ದುಪಡಿಸಿದ ಹೈಕೋರ್ಟ್ - ವಿಮಾನ ನಿಲ್ದಾಣ ಪ್ರಾಧಿಕಾರ

2010ರಲ್ಲಿ ನಡೆದಿದ್ದ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್ ‌ಇಂಡಿಯಾ ಹಾಗೂ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

Mangalore airport tragedy: High Court dismisses complaint against Air India
ಏರ್ ಇಂಡಿಯಾ ವಿರುದ್ಧದ ದೂರು ರದ್ದುಪಡಿಸಿದ ಹೈಕೋರ್ಟ್
author img

By

Published : Mar 12, 2021, 12:46 AM IST

ಬೆಂಗಳೂರು: ಮಂಗಳೂರಿನ ಬಜ್ಫೆ ವಿಮಾನದ ನಿಲ್ದಾಣದಲ್ಲಿ 2010ರಲ್ಲಿ ನಡೆದಿದ್ದ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್ ‌ಇಂಡಿಯಾ ಹಾಗೂ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಖಾಸಗಿ ದೂರು ಆಧರಿಸಿ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ ಮಂಗಳೂರು 2ನೇ ಜೆಎಂಎಫ್‌ಸಿ ಕೋರ್ಟ್ ಕ್ರಮ ಪ್ರಶ್ನಿಸಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತದರ ಅಧಿಕಾರಿ ಪೀಟರ್ ಅಬ್ರಹಾಂ, ಏರ್‌ ಇಂಡಿಯಾ ಲಿಮಿಟೆಡ್ ಮತ್ತದರ ಅಧಿಕಾರಿ ಆನ್ಸರ್ಬಟ್ ಡಿಸೋಜಾ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ಪುರಸ್ಕರಿಸಿರುವ ನ್ಯಾ.ಅಶೋಕ್ ಜಿ. ನಿಜಗಣ್ಣವರ್ ಅವರಿದ್ದ ಏಕ ಸದಸ್ಯ ಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರು ಮತ್ತು ಅದನ್ನು ಆಧರಿಸಿ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ ಜೆಎಂಎಫ್‌ಸಿ ನ್ಯಾಯಾಲಯದ ಕ್ರಮವನ್ನು ರದ್ದುಪಡಿಸಿ ಆದೇಶಿಸಿದೆ.

2010ರ ಮೇ 25ರಂದು ದುಬೈನಿಂದ ಮಂಗಳೂರಿನ ಬಜ್ಫೆ ವಿಮಾನ ನಿಲ್ದಾಣಕ್ಕೆ ಬಂದಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 152 ಪ್ರಯಾಣಿಕರು ಮೃತಪಟ್ಟಿದ್ದರು. ಪ್ರಕರಣ ಕುರಿತು 2012ರ ಮಾ.6ಮಂಗಳೂರು ಮೂಲದ ‘812 ಫೌಂಡೇಷನ್’ ಖಾಸಗಿ ದೂರು ದಾಖಲಿಸಿತ್ತು. ಐಸಿಎಒ ಮಾನದಂಡಗಳ ಅನುಸಾರ ಕಾರ್ಯನಿರ್ವಹಣೆಗೆ ವಿಮಾನ ನಿಲ್ದಾಣ ಯೋಗ್ಯವಾಗಿರಲಿಲ್ಲ. ಆದರೂ ವೈಮಾನಿಕ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಒದಗಿಸಬೇಕಾದ ಸೌಲಭ್ಯ ಒದಗಿಸಿರಲಿಲ್ಲ. ಏರ್ ಇಂಡಿಯಾ ಪ್ರಾಧಿಕಾರ ಮತ್ತು ನಾಗರೀಕ ವಿಮಾನಯಾನ ನಿರ್ದೇಶನಾಲಯದ ನಿರ್ದೇಶಕರ ಸಂಪೂರ್ಣ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.