ETV Bharat / state

ಮಂಗಳೂರು ಗಲಭೆ ವಿಚಾರ: ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಕುಮಾರಸ್ವಾಮಿ ಪ್ರತ್ಯುತ್ತರ - ಗಲಭೆಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ

ಮಂಗಳೂರು ಗಲಭೆಯ ಸತ್ಯಾಸತ್ಯತೆ ಕುರಿತ ಹೆಚ್​ಡಿಕೆ ಬಿಡುಗಡೆ ಮಾಡಿರುವ ಸಿಡಿ ವಿಚಾರವಾಗಿ ಬಿಜೆಪಿ ನಾಯಕರು ಟೀಕೆಗಳ ಸುರಿಮಳೆಗೈದಿದ್ದರು. ಇದೀಗ ಟ್ವೀಟ್‌ಗಳ ಮೂಲಕ ಅವರು ಪ್ರತ್ಯುತ್ತರ ನೀಡಿದ್ದಾರೆ.

ಕುಮಾರಸ್ವಾಮಿ
Kumaraswamy
author img

By

Published : Jan 12, 2020, 12:01 AM IST

ಬೆಂಗಳೂರು : ಮಂಗಳೂರು ಗಲಭೆಯ ಸತ್ಯಾಸತ್ಯತೆ ಕುರಿತ ಸಿಡಿ ಬಿಡುಗಡೆ ಬಗ್ಗೆ ಬಿಜೆಪಿಯ ನಾಯಕರು ಮಾಡಿರುವ ಟೀಕೆಗಳಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇದೀಗ ಟ್ವೀಟ್ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.

ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲ ಕಟ್ ಆ್ಯಂಡ್ ಪೇಸ್ಟ್ ವೀಡಿಯೋ ಎಂದಿದ್ದಾರೆ ಸಿಎಂ. ಸಿಡಿ ಬಿಡುಗಡೆ ವೇಳೆ ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಬಿಜೆಪಿ ನಾಯಕರಿಂದ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದಿದ್ದೆ. ಅದನ್ನು ರುಜುವಾತು ಪಡಿಸಿದಿರಿ. ಸಿಡಿಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿ ಕೊಳ್ಳುವ ಧೈರ್ಯ ನಿಮಗಿದೆಯೇ? ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ ಸಿಡಿಯನ್ನು ಕಟ್ ಆ್ಯಂಡ್ ಪೇಸ್ಟ್ ಮಾಡಲು ಬಿಜೆಪಿ ಸರ್ಕಾರ ಎಂದುಕೊಂಡಿರಾ? ಎಂದು ಪ್ರಶ್ನಿಸಿದ್ದಾರೆ.

  • "ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ" ಎಂದಿದ್ದಾರೆ ಸಿಎಂ.
    ಸಿ.ಡಿ. ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಮತ್ತೇನು ಬಿಜೆಪಿ ನಾಯಕರಿಂದ ನಿರೀಕ್ಷಿಸಲು ಸಾಧ್ಯ? ಎಂದಿದ್ದೆ. ಅದನ್ನು ರುಜುವಾತುಪಡಿಸಿದಿರಿ.
    1/12

    — H D Kumaraswamy (@hd_kumaraswamy) January 11, 2020" class="align-text-top noRightClick twitterSection" data="">

ಉಪ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಸ್ಥಿಮಿತ ಕಳೆದುಕೊಂಡ ಕುಮಾರಸ್ವಾಮಿ ಮಂಗಳೂರು ಗಲಭೆ ವಿಡಿಯೋ ಬಿಡುಗಡೆ ಮಾಡಿದ್ದಾರೆ ಎಂದು ಡಿಸಿಎಂ ಲಕ್ಮಣ ಸವದಿ ಆರೋಪಿಸಿದ್ದಾರೆ. ಸರಿ ಹಾಗಾದರೆ ಸವದಿ ಅದ್ಯಾವ ಸ್ಥಿಮಿತ ಕಳೆದುಕೊಂಡು ಸದನದಲ್ಲಿ ನೀಲಿ ಚಿತ್ರ ನೋಡಿದರು? ಈ ಬಾರಿ ಅವರು ಯಾವ ಚುನಾವಣೆ ಗೆದ್ದಿದ್ದಾರೆ? ಸ್ಥಿಮಿತ ಉಳಿದಿದೆಯೇ? ಎಂದು ಖಾರವಾಗಿ ಹೆಚ್ಡಿಕೆ ಪ್ರಶ್ನಿಸಿದ್ದಾರೆ.

ಪೊಲೀಸರು ಗಲಭೆ ಮಾಡುವುದಿಲ್ಲ, ನಿಯಂತ್ರಿಸುತ್ತಾರೆ. ಕುಮಾರಸ್ವಾಮಿ ಕಾಲದಲ್ಲೂ ಅದೇ ಪೊಲೀಸರೇ ಇದ್ದರು ಎಂದಿದ್ದಾರೆ ಗೃಹ ಸಚಿವರು. ಬೊಮ್ಮಾಯಿ ಅವರೇ ಅದು ನನ್ನ ಕಾಲ. ಶಾಂತಿ-ಸುವ್ಯವಸ್ಥೆಗಷ್ಟೇ ಪೊಲೀಸರ ಸೇವೆ ಪಡೆಯುತ್ತಿದ್ದೆವು. ಇದು ನಿಮ್ಮ ಕಾಲ. ಗಲಭೆ, ಗುಂಡೇಟಿಗೆ ನೀವು ಪೊಲೀಸರನ್ನು ಬಳಸಿಕೊಳ್ಳುತ್ತಿದ್ದೀರಿ ಎಂದು ಟಾಂಗ್ ನೀಡಿದ್ದಾರೆ.

  • ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿ ಕೊಳ್ಳುವ ಧೈರ್ಯ ನಿಮಗಿದೆಯೇ?
    ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ 'ಸಿಡಿ'ಯನ್ನು ನೀವು ಸೃಷ್ಟಿಸಿಕೊಂಡಂತೆ 'ಕಟ್ ಅಂಡ್ ಪೇಸ್ಟ್' ಬಿಜೆಪಿ ಸರ್ಕಾರ ಎಂದುಕೊಂಡಿರಾ?
    2/12

    — H D Kumaraswamy (@hd_kumaraswamy) January 11, 2020 " class="align-text-top noRightClick twitterSection" data=" ">

ಗಲಭೆಯ ಸಿಡಿ ಬಿಡುಗಡೆ ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದಿದ್ದಾರೆ. ಬಿಜೆಪಿಯಲ್ಲಿ ಸದ್ದು ಮಾಡಿದ ಸಿಡಿಗಳ ಸಂಖ್ಯೆ ಒಂದೇ. ಎಲ್ಲ ಸಿಡಿಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿಡಿಗಳು ಬಿಜೆಪಿಯ ಸ್ವತ್ತು. ಸಿಡಿ ಬಗ್ಗೆ ಮಾತಾಡುವಾಗ ಸದಾನಂದಗೌಡ ಎಚ್ಚರವಾಗಿರಲಿ ಎಂದು ವ್ಯಂಗ್ಯವಾಡಿದ್ದಾರೆ.

ಮಂಗಳೂರು ಶಾಂತಿಯಿಂದಿದೆ. ಮರಳಿ ಗಲಭೆ ಎಬ್ಬಿಸಿ ಅಲ್ಲಿ ಅಸ್ತಿತ್ವವೇ ಇಲ್ಲದ ತಮ್ಮ ಪಕ್ಷಕ್ಕೆ ನೆಲೆ ಕಲ್ಪಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಎಂದು ಸೋದರಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳೂರಿನ ಭಿನ್ನ ಧ್ವನಿಗಳ ಕೊರಳು ಬಿಗಿ ಹಿಡಿದು ಉಸಿರುಗಟ್ಟಿಸಿ ಸದ್ದು ಬಾರದಂತೆ ಮಾಡಿರುವುದು ನಿಮ್ಮ ಪ್ರಕಾರ ಶಾಂತಿಯೇ. ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ.

  • ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ. ಹಾಗಾದರೆ ಪೊಲೀಸರು ಕಲ್ಲು ತೂರಾಟ ಮಾಡಿದರಲ್ಲ... ಹೋರಾಟಗಾರರೇನು ಸೈತಾನರೇ? ಉತ್ತರಿಸುವಿರಾ ಶೋಭಾ ಅವರೇ?
    8/12

ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬೇಕಿಲ್ಲ. ಅಲ್ಲಿ ರಾಜಕಾರಣ ಮಾಡುತ್ತಿರುವುದು ನೀವು. ಅಲ್ಲಿ ಕೋಮು ಗಲಭೆ ಉಂಟು ಮಾಡುತ್ತಿರುವುದು ನೀವು. ಬಿಜೆಪಿಯವರಿಂದಲೇ ವಾಣಿಜ್ಯ ನಗರಿಯಾಗಬೇಕಿದ್ದ ಮಂಗಳೂರು ಕೋಮು ರಾಜಕಾರಣದ ಕಣವಾಗಿದೆ. ಸಮುದ್ರ ತೀರದ ಜಗತ್ತಿನ ಹಲವು ಪ್ರದೇಶಗಳು ವಾಣಿಜ್ಯ ನಗರಿಗಳಾಗಿವೆ. ಅಷ್ಟೇ ಏಕೆ? ಮುಂಬೈ, ಚೆನ್ನೈ, ಕೊಚ್ಚಿ ನಮ್ಮ ದೇಶದ ಉದಾಹರಣೆಗಳು. ಮಂಗಳೂರಿಗೂ ಅಂಥದ್ದೇ ಅವಕಾಶಗಳಿದ್ದವು. ದೇಶಕ್ಕೆ ದೊಡ್ಡ ಬ್ಯಾಂಕ್​ಗಳನ್ನು ಕೊಟ್ಟದ್ದು ಇದೇ ಕರಾವಳಿ. ಆದರೆ ನಿಮ್ಮ ಚಿಲ್ಲರೆ ರಾಜಕಾರಣ ಮಂಗಳೂರಿನ ವಾಣಿಜ್ಯಿಕ ಬೆಳವಣಿಗೆಗೆ ಅಡ್ಡಗಾಲಾಗಿದೆ. ಮಂಗಳೂರು ಶಾಂತವಾದರೆ ಅದು ವಾಣಿಜ್ಯಿಕವಾಗಿ ಬೆಳವಣಿಗೆಯಾಗುತ್ತದೆ. ದೇಶಕ್ಕೆ ಮಾದರಿಯಾಗುವ ತನ್ನ ಐತಿಹಾಸಿಕ ಗುಣವನ್ನು ಮುಂದುವರಿಸಿಕೊಂಡು ಹೋಗುತ್ತದೆ. ಶಾಂತಿ ಸ್ಥಾಪನೆಯಾಗಬೇಕಿದ್ದರೆ ಬಿಜೆಪಿ ತೆಪ್ಪಗಿರಬೇಕಷ್ಟೇ ಎಂದು ಸಲಹೆ ನೀಡಿದ್ದಾರೆ.

Intro:ಬೆಂಗಳೂರು : ಮಂಗಳೂರು ಗಲಭೆಯ ಸತ್ಯಾಸತ್ಯತೆ ಕುರಿತ ಸಿಡಿ ಬಿಡುಗಡೆಯ ಬಗ್ಗೆ ಬಿಜೆಪಿಯ ನಾಯಕರು ನೀಡಿರುವ ಪ್ರತಿಕ್ರಿಯೆಗಳಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.Body:ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ" ಎಂದಿದ್ದಾರೆ ಸಿಎಂ. ಸಿಡಿ ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಮತ್ತೇನು ಬಿಜೆಪಿ ನಾಯಕರಿಂದ ನಿರೀಕ್ಷಿಸಲು ಸಾಧ್ಯ? ಎಂದಿದ್ದೆ. ಅದನ್ನು ರುಜುವಾತುಪಡಿಸಿದಿರಿ. ಸಿಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿ ಕೊಳ್ಳುವ ಧೈರ್ಯ ನಿಮಗಿದೆಯೇ?. ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ 'ಸಿಡಿ'ಯನ್ನು ನೀವು ಸೃಷ್ಟಿಸಿಕೊಂಡಂತೆ 'ಕಟ್ ಅಂಡ್ ಪೇಸ್ಟ್' ಬಿಜೆಪಿ ಸರ್ಕಾರ ಎಂದುಕೊಂಡಿರಾ? ಎಂದು ತಿರುಗೇಟು ನೀಡಿದ್ದಾರೆ.
ಉಪ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಸ್ಥಿಮಿತ ಕಳೆದುಕೊಂಡ ಕುಮಾರಸ್ವಾಮಿ ಮಂಗಳೂರು ಗಲಭೆ ವಿಡಿಯೊ ಬಿಡುಗಡೆ ಮಾಡಿದ್ದಾರೆ ಎಂದು ಡಿಸಿಎಂ ಲಕ್ಮಣ ಸವದಿ ಆರೋಪಿಸಿದ್ದಾರೆ. ಸರಿ... ಹಾಗಾದರೆ ಸವದಿ ಅದ್ಯಾವ ಸ್ಥಿಮಿತ ಕಳೆದುಕೊಂಡು ಸದನದಲ್ಲಿ ನೀಲಿ ಚಿತ್ರ ನೋಡಿದರು? ಈ ಬಾರಿ ಅವರು ಯಾವ ಚುನಾವಣೆ ಗೆದ್ದಿದ್ದಾರೆ? ಸ್ಥಿಮಿತ ಉಳಿದಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಪೊಲೀಸರು ಗಲಭೆ ಮಾಡುವುದಿಲ್ಲ, ನಿಯಂತ್ರಿಸುತ್ತಾರೆ. ಕುಮಾರಸ್ವಾಮಿ ಕಾಲದಲ್ಲೂ ಅದೇ ಪೋಲೀಸರೇ ಇದ್ದರು ಎಂದಿದ್ದಾರೆ ಗೃಹ ಸಚಿವರು. ಬೊಮ್ಮಾಯಿ ಅವರೇ ಅದು ನನ್ನ ಕಾಲ. ಶಾಂತಿ-ಸುವ್ಯವಸ್ಥೆಗಷ್ಟೇ ಪೊಲೀಸರ ಸೇವೆ ಪಡೆಯುತ್ತಿದ್ದೆವು. ಇದು ನಿಮ್ಮ ಕಾಲ. ಗಲಭೆ, ಗುಂಡೇಟಿಗೆ ನೀವು ಪೊಲೀಸರನ್ನು ಬಳಸಿಕೊಳ್ಳುತ್ತಿದ್ದೀರಿ ಎಂದು ಟಾಂಗ್ ನೀಡಿದ್ದಾರೆ.
ನನ್ನ ಕಾಲದಲ್ಲೂ ಇದೇ ಪೊಲೀಸರಿದ್ದರು. ಹೌದು. ಆದರೆ ನನ್ನ ಕಾಲದಲ್ಲಿ ಗಲಭೆಗಳು ಯಾಕೆ ಆಗಲಿಲ್ಲ? ಗೋಲಿಬಾರ್ ಗಳು ಯಾಕೆ ಆಗಲಿಲ್ಲ? ಇದಕ್ಕೆ ನೀವು ಉತ್ತರಿಸುವಿರಾ? ಎಂದು ಕುಮಾರಸ್ವಾಮಿ ಅವರು ಎದುರೇಟು ಕೊಟ್ಟಿದ್ದಾರೆ.
ಗಲಭೆಯ ಸಿಡಿ ಬಿಡುಗಡೆ ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದಿದ್ದಾರೆ. ಬಿಜೆಪಿಯಲ್ಲಿ ಸದ್ದು ಮಾಡಿದ ಸಿಡಿಗಳ ಸಂಖ್ಯೆ ಒಂದೆರಡೇ? ಎಲ್ಲ ಸಿಡಿಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿಡಿಗಳು ಬಿಜೆಪಿಯ ಸ್ವತ್ತು. ಸಿಡಿ ಬಗ್ಗೆ ಮಾತಾಡುವಾಗ ಸದಾನಂದಗೌಡ ಎಚ್ಚರವಾಗಿರಲಿ ಎಂದು ವ್ಯಂಗ್ಯವಾಡಿದ್ದಾರೆ.
ಮಂಗಳೂರು ಶಾಂತಿಯಿಂದಿದೆ, ಮರಳಿ ಗಲಭೆ ಎಬ್ಬಿಸಿ ಅಲ್ಲಿ ಅಸ್ತಿತ್ವವೇ ಇಲ್ಲದ ತಮ್ಮ ಪಕ್ಷಕ್ಕೆ ನೆಲೆ ಕಲ್ಪಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಎಂದು ಸೋದರಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಂಗಳೂರಿನ ಭಿನ್ನ ಧ್ವನಿಗಳ ಕೊರಳು ಬಿಗಿ ಹಿಡಿದು, ಉಸಿರುಗಟ್ಟಿಸಿ, ಸದ್ದು ಬಾರದಂತೆ ಮಾಡಿರುವುದು ನಿಮ್ಮ ಪ್ರಕಾರ 'ಶಾಂತಿ'ಯೇ?. ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ. ಹಾಗಾದರೆ ಪೊಲೀಸರು ಕಲ್ಲು ತೂರಾಟ ಮಾಡಿದರಲ್ಲ... ಹೋರಾಟಗಾರರೇನು ಸೈತಾನರೇ? ಉತ್ತರಿಸುವಿರಾ ಶೋಭಾ ಅವರೇ? ಎಂದು ಪ್ರಶ್ನಿಸಿದ್ದಾರೆ.
ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬೇಕಿಲ್ಲ. ಅಲ್ಲಿ ರಾಜಕಾರಣ ಮಾಡುತ್ತಿರುವುದು ನೀವು. ಅಲ್ಲಿ ಕೋಮು ಗಲಭೆ ಉಂಟು ಮಾಡುತ್ತಿರುವುದು ನೀವು. ವಾಣಿಜ್ಯ ನಗರಿಯಾಗಬೇಕಿದ್ದ ಮಂಗಳೂರು ಕೋಮು ರಾಜಕಾರಣದ ಕಣವಾಗಿದ್ದು‌ ಬಿಜೆಪಿಯಿಂದ. ಸಮುದ್ರ ತೀರದ ಜಗತ್ತಿನ ಹಲವು ಪ್ರದೇಶಗಳು ವಾಣಿಜ್ಯ ನಗರಿಗಳಾಗಿವೆ. ಅಷ್ಟೇ ಏಕೆ, ಮುಂಬೈ, ಚೆನ್ನೈ, ಕೊಚ್ಚಿ ನಮ್ಮ ದೇಶದ ಉದಾಹರಣೆಗಳು. ಮಂಗಳೂರಿಗೂ ಅಂಥದ್ದೇ ಅವಕಾಶಗಳಿದ್ದವು, ಇದೆ ಕೂಡ. ದೇಶಕ್ಕೆ ದೊಡ್ಡ ಬ್ಯಾಂಕ್ ಗಳನ್ನು ಕೊಟ್ಟದ್ದು ಇದೇ ಕರಾವಳಿ. ಆದರೆ ನಿಮ್ಮ ಚಿಲ್ಲರೆ ರಾಜಕಾರಣ ಮಂಗಳೂರಿನ ವಾಣಿಜ್ಯಿಕ ಬೆಳವಣಿಗೆಗೆ ಅಡ್ಡಗಾಲಾಗಿದೆ. ಮಂಗಳೂರು ಶಾಂತವಾದರೆ ಅದು ವಾಣಿಜ್ಯಿಕವಾಗಿ ಬೆಳವಣಿಗೆಯಾಗುತ್ತದೆ. ದೇಶಕ್ಕೆ ಮಾದರಿಯಾಗುವ ತನ್ನ ಐತಿಹಾಸಿಕ ಗುಣವನ್ನು ಮುಂದುವರಿಸಿಕೊಂಡು ಹೋಗುತ್ತದೆ. ಶಾಂತಿ ಸ್ಥಾಪನೆಯಾಗಬೇಕಿದ್ದರೆ ಬಿಜೆಪಿ ತೆಪ್ಪಗಿರಬೇಕಷ್ಟೇ ಎಂದು ಸಲಹೆ ನೀಡಿದ್ದಾರೆ.
ಮಂಗಳೂರಿನಲ್ಲಿ ನಾನು ರಾಜಕಾರಣ ಮಾಡಬಾರದು ಎನ್ನುತ್ತಾರೆ ಸೋದರಿ ಶೋಭಾ. ಆದರೆ, ರಾಜಕೀಯ ಪಕ್ಷವೊಂದರ ಶಾಸಕಾಂಗ ಪಕ್ಷದ ನಾಯಕನಾದ ನಾನು ಮಂಗಳೂರಲ್ಲಿ ಏಕೆ ರಾಜಕಾರಣ ಮಾಡಬಾರದು? ಹಾಗೇನಾದರೂ ನನಗೆ ನಿರ್ಬಂಧವಿದೆಯೇ? ಮಂಗಳೂರಲ್ಲಿ ನಾನೂ ರಾಜಕಾರಣ ಮಾಡುತ್ತೇನೆ. ಆದರೆ ಬಿಜೆಪಿಯಂತಲ್ಲ. ಸಾತ್ವಿಕವಾಗಿ‌ ಎಂದು ತಿರುಗೇಟು ನೀಡಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.