ಬೆಂಗಳೂರು: ಮಂಜುನಾಥ್ ಪ್ರಸಾದ್ ಅವರಿಗೆ ಮತ್ತೆ ಬಿಬಿಎಂಪಿ ವ್ಯಾಪ್ತಿಯ ಕೋವಿಡ್ ನಿರ್ವಹಣೆ ಜವಾಬ್ದಾರಿ ಕೊಡಲಾಗಿದೆ.
![Manjunath Prasad is again responsible for the management of covid](https://etvbharatimages.akamaized.net/etvbharat/prod-images/kn-bng-01-govt-order-7202707_27042021222346_2704f_1619542426_354.jpg)
ಇತ್ತೀಚೆಗಷ್ಟೇ ಬಿಬಿಎಂಪಿ ಆಯುಕ್ತರ ಹುದ್ದೆಯಿಂದ ವರ್ಗಾವಣೆಗೊಂಡಿದ್ದ, ಹಿರಿಯ ಐಎಎಸ್ ಅಧಿಕಾರಿ ಹಾಗೂ ಮೂರು ಬಾರಿ ಪಾಲಿಕೆಯ ಆಯುಕ್ತರಾಗಿದ್ದ ಮಂಜುನಾಥ್ ಪ್ರಸಾದ್ ಅವರಿಗೆ ಕೋವಿಡ್ ನಿರ್ವಹಣೆ ಜವಾಬ್ದಾರಿ ಕೊಡಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕಂದಾಯ ಇಲಾಖೆಯ ಪ್ರದಾನ ಕಾರ್ಯದರ್ಶಿಯಾಗಿರುವ ಮಂಜುನಾಥ್ ಪ್ರಸಾದ್, ತಮ್ಮ ಹಾಲಿ ಕರ್ತವ್ಯದ ಜೊತೆಗೆ ಕೋವಿಡ್ ಸಂಬಂಧಿತ ಕರ್ತವ್ಯಗಳ ನಿರ್ವಹಣೆಗೆ ಬಿಬಿಎಂಪಿಯ ಮುಖ್ಯ ಆಯುಕ್ತರಾಗಿರುವ ಗೌರವ್ ಗುಪ್ತಾ ಅವರಿಗೆ ನೆರವು ಒದಗಿಸುವ ಕಾರ್ಯನಿರ್ವಹಿಸುವಂತೆ ಆದೇಶಿಸಿದೆ.