ಬೆಂಗಳೂರು: ಬಿಬಿಎಂಪಿ ಆಯುಕ್ತ ಸ್ಥಾನದಿಂದ ಎತ್ತಂಗಡಿಯಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಬಿಬಿಎಂಪಿ ಆಯುಕ್ತ ಸ್ಥಾನದಿಂದ ಮಂಜುನಾಥ್ ಪ್ರಸಾದ್ ಅವರನ್ನು ಒಂದು ವಾರದ ಹಿಂದೆ ವರ್ಗಾವಣೆ ಮಾಡಲಾಗಿತ್ತು. ಆದರೆ ಸ್ಥಳ ನಿಯೋಜನೆ ಮಾಡಿರಲಿಲ್ಲ. ಇದೀಗ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ.
ಈ ಹಿಂದೆ ಕಾರ್ಯದರ್ಶಿಯಾಗಿದ್ದ ರಾಜಕುಮಾರ್ ಖತ್ರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದ್ದು, ಜೊತೆಗೆ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ಅವರನ್ನು ಕಲಬುರ್ಗಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.