ಬೆಂಗಳೂರು: ಕೆಆರ್ಪುರ ಮತ್ತು ವೈಟ್‌ಫೀಲ್ಡ್ ನಡುವಿನ ಮೂರನೆಯ ಹಂತದ 13.71 ಕಿಲೋಮೀಟರ್ ಮೆಟ್ರೋ ಮಾರ್ಗ ಮಾರ್ಚ್ 25 ರಂದು ಉದ್ಘಾಟನೆಯಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ ತಿಳಿಸಿದೆ. ನೇರಳೆ ಮಾರ್ಗದಲ್ಲಿ 12 ಮೆಟ್ರೋ ನಿಲ್ದಾಣಗಳಲ್ಲಿ ಕೊನೆಯ ಹಂತದ ಸುರಕ್ಷತಾ ಮಾನದಂಡಗಳನ್ನು ಬಿಎಂಆರ್‌ಸಿಎಲ್ ಅಧಿಕಾರಿಗಳು ಮತ್ತು ಸಿಎಂಆರ್‌ಎಸ್ ತಂಡ ಪರಿಶೀಲನೆ ನಡೆಸುತ್ತಿದ್ದಾರೆ ಅಂತಿಮ ಹಂತದ ಟ್ರಯಲ್ ರನ್ ಅನ್ನು ರೈಲ್ವೆ ಸೇಫ್ಟಿ ಕಮಿಷನ್ ಈಗಾಗಲೆ ನಡೆಸಲಾಗಿದೆ ಎಂದು ಹೇಳಿದೆ.
ವೈಟ್‌ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯ ಸಾಯಿ ಆಸ್ಪತ್ರೆ, ನಲ್ಲೂರ ಹಳ್ಳಿ, ಕುಂದನಹಳ್ಳಿ, ಸೀತಾರಾಮ ಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರ್ ಪಾಳ್ಯ, ಮಹದೇವಪುರ ಮತ್ತು ಕೆಆರ್ ಪುರಂ ನಿಲ್ದಾಣ ಸೇರಿದಂತೆ 12 ಮೆಟ್ರೋ ನಿಲ್ದಾಣಗಳು ಕಾರ್ಯಾಚರಣೆ ನೆಡೆಸಲಿವೆ. ಈ ಮಾರ್ಗದ ರೈಲುಗಳು 12 ನಿಮಿಷಗಳ ಅಂತರದಲ್ಲಿ ಸಂಚರಿಸಲಿವೆ ಎಂದು ಹೇಳಿದೆ.
ಬಿಇಎಂಎಲ್ ನಿಂದ ಒಟ್ಟು 7 ರೈಲುಗಳು: ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಬಿಇಎಂಎಲ್ ಒಟ್ಟು 7 ರೈಲುಗಳನ್ನು ಈ ಮಾರ್ಗಕ್ಕೆ ತಯಾರಿಸಿದೆ. ಒಟ್ಟು 400 ಕೋಟಿ ರೂ. ವೆಚ್ಚದಲ್ಲಿ 42 ಮೆಟ್ರೋ ಬೋಗಿಗಳನ್ನು ತಯಾರಿಸಿದೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೊಸ ನಮ್ಮ ಮೆಟ್ರೋ ಮಾರ್ಗದ ವೈಶಿಷ್ಟ್ಯಗಳು: ಕೆ.ಆರ್ ಪುರ-ವೈಟ್ ಫೀಲ್ಡ್ ನೇರಳ ಮಾರ್ಗ ಐಟಿ ಉದ್ಯೋಗಿಗಳಿಗೆ ಸಹಾಯಕವಾಗಲಿದೆ. ಕೆಆರ್ ಪುರ ಮತ್ತು ವೈಟ್‌ಫೀಲ್ಡ್ ನಿಲ್ದಾಣಗಳಲ್ಲಿ ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಹೆಚ್ಚುವರಿ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ನಿಲ್ದಾಣಗಳ ಸುತ್ತ ಇರುವ ಸೇವಾ ರಸ್ತೆಗಳ ಎರಡೂ ಬದಿಯಲ್ಲಿ ಪ್ರವೇಶ ಮತ್ತು ನಿರ್ಗಮನ ದ್ವಾರದೊಂದಿಗೆ ಬಿಎಂಟಿಸಿ ಬಸ್ ನಿಲ್ದಾಣಗಳು ಇರಲಿವೆ. ಪಟ್ಟಂದೂರು ಅಗ್ರಹಾರ ನಿಲ್ದಾಣದಲ್ಲಿ ಐಟಿಪಿಬಿಗೆ ನೇರವಾಗಿ ಮೇಲ್ವೇತುವೆ ಸಂಪರ್ಕ ಕಲ್ಪಿಸಲಾಗಿದೆ. ವಿಕಲಚೇತರು ಎಲ್ಲಾ ನಿಲ್ದಾಣಗಳನ್ನು ಉಪಯೋಗಿಸುವ ಸೌಲಭ್ಯ ಇರಲಿದೆ.
ಮೂರನೆಯ ಹಂತದ ನಾಲ್ಕು ಹೊಸ ಮೆಟ್ರೋ ಕಾರಿಡಾರ್: ನಮ್ಮ ಮೆಟ್ರೋ ಸಂಸ್ಥೆ ಮೂರನೆಯ ಹಂತದಲ್ಲಿ ನಾಲ್ಕು ಹೊಸ ಮೆಟ್ರೋ ಕಾರಿಡಾರ್‌ಗಳನ್ನು ನಿರ್ಮಾಣ ಮಾಡಲಿದೆ. ವೈಟ್‌ಫೀಲ್ಡ್ ನಿಂದ ಹೊಸಕೋಟೆ, ಬನ್ನೇರುಘಟ್ಟದಿಂದ ಜಿಗಣಿ, ಎಂಜಿ ರಸ್ತೆಯಿಂದ ಹೋಪ್ ಫಾರ್ಮ್ ಜಂಕ್ಷನ್ ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ನಾಗವಾರ ನಡುವಿನ ಮೂರನೇ ಹಂತದ ಮೆಟ್ರೋ ಕಾಮಗಾರಿ ನಡೆಯಲಿದೆ.
ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ನಡುವಿನ 13 ಕಿ ಲೋ ಮೀಟರ್ ಮೆಟ್ರೋ ಮಾರ್ಗದಲ್ಲಿ 12 ಮೆಟ್ರೋ ನಿಲ್ದಾಣಗಳಲ್ಲಿ ಸುರಕ್ಷತಾ ಮಾನದಂಡಗಳನ್ನು ಬಿಎಂಆರ್‌ಸಿಎಲ್ ಅಧಿಕಾರಿಗಳು ಮತ್ತು ಸಿಎಂಆರ್‌ಎಸ್ ತಂಡ ಪರಿಶೀಲನೆ ನಡೆಸುತ್ತಿದೆ. ವೈಟ್‌ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯ ಸಾಯಿ ಆಸ್ಪತ್ರೆ, ನಲ್ಲೂರ ಹಳ್ಳಿ, ಕುಂದನಹಳ್ಳಿ, ಸೀತಾರಾಮ ಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರ್ ಪಾಳ್ಯ, ಮಹದೇವಪುರ ಮತ್ತು ಕೆಆರ್ ಪುರಂ ನಿಲ್ದಾಣ ಸೇರಿದಂತೆ 12 ಮೆಟ್ರೋ ನಿಲ್ದಾಣಗಳು ಕಾರ್ಯಾಚರಣೆ ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ನಿಂದ 4ನೇ ಗ್ಯಾರಂಟಿ ಘೋಷಣೆ: ನಿರುದ್ಯೋಗ ಯುವಕ, ಯುವತಿಯರಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ