ETV Bharat / state

18 ವರ್ಷ ತುಂಬದೇ ನಡೆಯುವ ವಿವಾಹವನ್ನು ಅನೂರ್ಜಿತಗೊಳಿಸಲಾಗದು: ಹೈಕೋರ್ಟ್

author img

By

Published : Jan 23, 2023, 11:03 PM IST

Updated : Jan 25, 2023, 8:19 PM IST

18 ವರ್ಷಕ್ಕೂ ಮುನ್ನ ನಡೆದಿದ್ದ ವಿವಾಹವನ್ನು ರದ್ದುಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯ-ವಿವಾಹವನ್ನೇ ಅನೂರ್ಜಿತಗೊಳಿಸಲಾಗುವುದಿಲ್ಲ ಎಂದು ಹೈಕೋರ್ಟ್​ ಅಭಿಪ್ರಾಯ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು : ಮದುವೆಯ ಸಂದರ್ಭದಲ್ಲಿ 18 ವರ್ಷ ತುಂಬಿರಲಿಲ್ಲ ಎಂಬ ಕಾರಣಕ್ಕೆ ವಿವಾಹವನ್ನೇ ಅನೂರ್ಜಿತಗೊಳಿಸಲಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. 18 ವರ್ಷಕ್ಕೂ ಮುನ್ನ ನಡೆದಿದ್ದ ವಿವಾಹವನ್ನು ರದ್ದುಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಹಿಳೆಯೊಬ್ಬರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಈ ರೀತಿ ಹೇಳಿದೆ.

ಆದೇಶವನ್ನು ರದ್ದುಪಡಿಸಿದ ಕೌಟುಂಬಿಕ ನ್ಯಾಯಾಲಯ: ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠ, ಅರ್ಜಿಯನ್ನು ಪುರಸ್ಕರಿಸಿದ್ದು, ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ.

ಮೇಲ್ಮನವಿದಾರರ ವಿವಾಹ ಅನೂರ್ಜಿತವಲ್ಲವೆಂದು ಆದೇಶಿಸಿರುವ ಹೈಕೋರ್ಟ್: ಜತೆಗೆ ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 5(3) ಪ್ರಕಾರ, ಮದುವೆ ಸಂದರ್ಭದಲ್ಲಿ ವರನ ವಯಸ್ಸು 21 ಮತ್ತು ವಧುವಿನ ವಯಸ್ಸು 18 ಇರಬೇಕು. ಆದರೆ, ವಿವಾಹವನ್ನು ರದ್ದುಪಡಿಸಬೇಕಾದರೆ ಕಾಯ್ದೆಯ ಸೆಕ್ಷನ್ 5ರ ನಿಯಮ 1, 4 ಮತ್ತು 5ಕ್ಕೆ ವಿರುದ್ಧವಾಗಿರಬೇಕು. ಮದುವೆಯಾದಾಗ 18 ವರ್ಷ ಆಗಿರಬೇಕು ಎಂಬ ನಿಯಮವನ್ನು ಸೆಕ್ಷನ್ 11ರ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಆದ್ದರಿಂದ ಅಪ್ರಾಪ್ತೆ ಎಂಬ ಕಾರಣಕ್ಕೆ ಸೆಕ್ಷನ್ 11 ಪ್ರಕಾರ, ವಿವಾಹ ಅನೂರ್ಜಿತಗೊಳಿಸುವುದು ಈ ಪ್ರಕರಣಕ್ಕೆ ಅನ್ವಯಿಸದು ಎಂದು ಸ್ಪಷ್ಟಪಡಿಸಿದೆ. ಜತಗೆ, ಮೇಲ್ಮನವಿದಾರರ ವಿವಾಹ ಅನೂರ್ಜಿತವಲ್ಲವೆಂದು ಆದೇಶಿಸಿರುವ ಹೈಕೋರ್ಟ್, ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ.

ಇದನ್ನೂ ಓದಿ : ಅನುದಾನಿತ ಶಿಕ್ಷಣ ಸಂಸ್ಥೆ ಸಿಬ್ಬಂದಿ ವೇತನ ತಾರತಮ್ಯ ನಿವಾರಣೆಗೆ ಸಮಿತಿ ರಚಿಸಿ ಸರ್ಕಾರ ಆದೇಶ

ಪ್ರಕರಣದ ಹಿನ್ನೆಲೆ ಏನು ? : ಮಂಡ್ಯ ಜಿಲ್ಲೆಯ ಸುಶೀಲಾ ಅವರು ಮಂಜುನಾಥ್ ಅವರೊಂದಿಗೆ ಹಿಂದೂ ವಿವಾಹ ಕಾಯ್ದೆ ಪ್ರಕಾರ 2012ರ ಜೂ.15ರಂದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದ್ದರು. ಈ ನಡುವೆ ಮದುವೆಯ ಸಂದರ್ಭದಲ್ಲಿ ಪತ್ನಿ ಸುಶೀಲಾ ಅಪ್ರಾಪ್ತೆಯಾಗಿದ್ದರು. ಆಕೆಯ ಜನ್ಮ ದಿನಾಂಕ 06.09.1995 ಎಂಬುದಾಗಿತ್ತು ಎಂಬ ಅಂಶ ಪತಿ ಮಂಜುನಾಥ್ ಅವರಿಗೆ ಗೊತ್ತಾಗಿತ್ತು.

ಇದನ್ನೂ ಓದಿ: ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ: ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಕೌಟುಂಬಿಕ ನ್ಯಾಯಾಲಯ ಅರ್ಜಿಯನ್ನು ಪುರಸ್ಕರಿಸಿತ್ತು: ಈ ಹಿನ್ನೆಲೆ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಪತಿ ಮಂಜುನಾಥ್, ತಮ್ಮ ಮದುವೆಯನ್ನು ರದ್ದು ಅಥವಾ ಅಸಿಂಧುಗೊಳಿಸಬೇಕೆಂದು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕೌಟುಂಬಿಕ ನ್ಯಾಯಾಲಯ ಅರ್ಜಿಯನ್ನು ಪುರಸ್ಕರಿಸಿತ್ತು. ಜತೆಗೆ, ಹಿಂದೂ ವಿವಾಹ ಕಾಯ್ದೆ-1955ರ ಸೆಕ್ಷನ್ 5(3)ರಂತೆ ಮದುವೆಯಾಗಲು ಮಧುವಿಗೆ 18 ವರ್ಷ ಆಗಿರಬೇಕು. ಪ್ರಕರಣದಲ್ಲಿ ಮದುವೆ ಆದ ಸಮಯದಲ್ಲಿ ಪತ್ನಿಗೆ 16 ವರ್ಷ 11 ತಿಂಗಳು 8 ದಿನ ಆಗಿತ್ತು. ಅಂದರೆ ಮದುವೆಯಾದಾಗ ಆಕೆ ಅಪ್ತಾಪ್ತರಾಗಿದ್ದರು. ಆ ಕಾರಣಕ್ಕೆ ಮದುವೆ ಕಾಯ್ದೆಯ ಸೆಕ್ಷನ್ 11ರ ಪ್ರಕಾರ ಊರ್ಜಿತವಾಗುವುದಿಲ್ಲ ಎಂದು ಆದೇಶಿಸಿತ್ತು.

ಇದನ್ನೂ ಓದಿ: ಅನುಕಂಪದ ಆಧಾರದಲ್ಲಿ ಉದ್ಯೋಗಾವಕಾಶ ಪಡೆಯುವುದು ಹಕ್ಕಲ್ಲ: ಹೈಕೋರ್ಟ್​

ಆದೇಶ ರದ್ದುಪಡಿಸಲು ಕೋರಿ ಅರ್ಜಿದಾರರಿಂದ ಮೇಲ್ಮನವಿ: ಅಲ್ಲದೆ, ಸುಶೀಲಾ ಮತ್ತು ಮಂಜುನಾಥ್ ಅವರ ಮದುವೆಯನ್ನು ಅನೂರ್ಜಿತಗೊಳಿಸಿ 2015ರ ಜನವರಿ 8ರಂದು ಆದೇಶಿಸಿತ್ತು. ಈ ಆದೇಶ ರದ್ದುಪಡಿಸಲು ಕೋರಿ ಸುಶೀಲಾ ಅವರು ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ವಿಭಾಗೀಯ ಪೀಠ ಅರ್ಜಿಯನ್ನು ಪುರಸ್ಕರಿಸಿದ್ದು, ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿ ಆದೇಶಿಸಿದೆ.

ಇದನ್ನೂ ಓದಿ : ಕೇಂದ್ರದ ಆಸ್ತಿಗಳಿಗೆ ರಾಜ್ಯ ಸರ್ಕಾರಕ್ಕೆ ತೆರಿಗೆ ಪಾವತಿಸುವಂತಿಲ್ಲ : ಹೈಕೋರ್ಟ್ ಆದೇಶ

Last Updated : Jan 25, 2023, 8:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.