ETV Bharat / state

ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ - etv bharat kannada

ಲಲಿತಾ ಪಂಚಮಿ ವಿಶೇಷವಾಗಿದ್ದು, ಈ ದಿನದಂದು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಹಿಂದೂ ಮಹಿಳೆಯರನ್ನು ಬರಮಾಡಿಕೊಂಡು ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ಸಾಮೂಹಿಕ ಕುಂಕುಮಾರ್ಚನೆ ನೆರವೇರಿಸುವಂತೆ ಸೂಚಿಸಲಾಗಿದೆ.

mass-kumkumarchana-in-temples-on-lalita-panchmai
ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ
author img

By

Published : Sep 28, 2022, 6:02 PM IST

ಬೆಂಗಳೂರು: ಲೋಕ ಕಲ್ಯಾಣಕ್ಕಾಗಿ ನವರಾತ್ರಿಯ ಲಲಿತಾ ಪಂಚಮಿಯಂದು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸೆ. 30ರಂದು ಹಿಂದೂ ಮಹಿಳೆಯರ ಸಮ್ಮುಖದಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದ್ದಾರೆ.

ಪ್ರತಿ ವರ್ಷದ ಆಶ್ವಯುಜ ಮಾಸದ ಮೊದಲ ದಿನ ಅಂದರೆ ಪಾಡ್ಯದಿಂದ ನವಮಿಯವರೆಗೆ (ನವರಾತ್ರಿ) ಶಕ್ತಿ ಸ್ವರೂಪಿಣಿಯವರಾದ ಜಗನ್ಮಾತೆಯರನ್ನು ಹಿಂದಿನಿಂದಲೂ ವಿಶೇಷವಾಗಿ ಆರಾಧಿಸುವುದು ಹಿಂದೂ ಧರ್ಮದಲ್ಲಿ ನಡೆಸಿಕೊಂಡು ಬರುತ್ತಿರುವ ಆಚರಣೆಯಾಗಿದೆ. ಸೆ. 30ರ ಶುಕ್ರವಾರವು ಲಲಿತಾ ಪಂಚಮಿ ವಿಶೇಷವಾಗಿದ್ದು, ಈ ದಿನದಂದು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಹಿಂದೂ ಮಹಿಳೆಯರನ್ನು ಬರಮಾಡಿಕೊಂಡು ಸಾಮೂಹಿಕ ಕುಂಕುಮಾರ್ಚನೆಯನ್ನು ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ನೆರವೇರಿಸುವಂತೆ ಸೂಚಿಸಲಾಗಿದೆ.

mass kumkumarchana in temples on lalita panchmai
ಸುತ್ತೋಲೆ

ಸೆಪ್ಟೆಂಬರ್‌ 30ರಂದು ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಕಾರಣಾಂತರಗಳಿಂದ ಸಾಧ್ಯವಾಗದಿದ್ದರೆ ಅಕ್ಟೋಬರ್ 3ರ ಸೋಮವಾರ ದುರ್ಗಾಷ್ಠಮಿಯಂದು ಈ ಕಾರ್ಯಕ್ರಮವನ್ನು ನಡೆಸಬೇಕು. ಈ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಅಧಿಕಾರಿಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಕಳೆದೊಂದು ವರ್ಷದಲ್ಲಿ ಪ್ರತಿ ಹಬ್ಬವನ್ನೂ ವಿಶೇಷವಾಗಿ ಆಚರಿಸಲಾಗುತ್ತಿದೆ. ಬಲಿಪಾಢ್ಯಮಿಯಂದು ಗೋಪೂಜೆ, ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಣೆ, ವರಮಹಾಲಕ್ಷ್ಮಿ ವ್ರತದಂದು ಮಹಿಳೆಯರಿಗೆ ಅರಿಶಿನ ಕುಂಕುಮ ಹಾಗೂ ಹಸಿರು ಬಳೆಗಳ ವಿತರಣೆ, ಕೋವಿಡ್‌ ಕಾಲದಲ್ಲಿ ಮಕ್ಕಳಿಗೋಸ್ಕರ ವಿಶೇಷ ಪೂಜೆ ನಡೆಸಲಾಗುತ್ತಿದೆ.

ಹೀಗೆ ಹಲವು ವಿಶೇಷ ಕಾರ್ಯಕ್ರಮಗಳ ಮೂಲಕ ದೇವಸ್ಥಾನದ ಕಾರ್ಯಗಳಲ್ಲಿ ಸಾರ್ವಜನಿಕರ ಸಹಭಾಗಿತ್ವ ಹೆಚ್ಚಿಸುವುದು ಹಾಗೂ ಹಿಂದೂ ಧರ್ಮ ಮತ್ತು ಸಂಸ್ಕೃತಿಗಳನ್ನು ರಕ್ಷಿಸಿ ಬೆಳೆಸುವುದು ನಮ್ಮ ಉದ್ದೇಶ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: 'ಅಪ್ಪುದಿನ' ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್ ಭಾವುಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.