ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಹಾಗೂ ಖಾಸಗೀಕರಣ ನೀತಿ ವಿರೋಧಿಸಿ ಖಾಸಗೀಕರಣ ವಿರೋಧಿ ವೇದಿಕೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಿಇಎಂಎಲ್, ಹೆಚ್ಎಎಲ್, ಬಿಇಎಲ್, ಬಿಹೆಚ್ಇಎಲ್, ವಿಐಎಸ್ಎಲ್ ಕಾರ್ಮಿಕರು ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಕಾಲ್ನಡಿಗೆಯ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಓದಿ: ಮೊದಲು ನೀವು ಮಾಡಿದ ಪಾಪವನ್ನು ಜ್ಞಾಪಕ ಮಾಡಿಕೊಳ್ಳಿ: ಹೆಚ್.ವಿಶ್ವನಾಥ್ ಗುಡುಗು
ನಂತರ ಸ್ವಾತಂತ್ರ್ಯ ಉದ್ಯಾನವನ ತಲುಪಿ ಫ್ರೀಡಂ ಪಾರ್ಕ್ಗೆ ತೆರಳಿ ಬಹಿರಂಗ ಸಮಾವೇಶ ನಡೆಸಲಾಯಿತು.