ETV Bharat / state

ಸವದತ್ತಿ ಯಲ್ಲಮ್ಮ ಸುಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್​: ಸಚಿವ ರಾಮಲಿಂಗಾರೆಡ್ಡಿ

ಸವದತ್ತಿ ಯಲ್ಲಮ್ಮ ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆಗೆ ಮತ್ತು ಭಕ್ತರ ದರ್ಶನಕ್ಕೆ ಅನುಕೂಲವಾಗುವಂತೆ ಮಾಸ್ಟರ್ ಪ್ಲಾನ್​ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Etv Bharatmaster-plan-for-development-of-savadatti-yallamma-sukshetra-says-minister-ramalingareddy
ಸವದತ್ತಿ ಯಲ್ಲಮ್ಮ ಸುಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್​: ಸಚಿವ ರಾಮಲಿಂಗಾರೆಡ್ಡಿ
author img

By ETV Bharat Karnataka Team

Published : Jan 8, 2024, 10:56 PM IST

ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

ಬೆಳಗಾವಿ: ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್​ ರೂಪಿಸಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಉತ್ತರ ಕರ್ನಾಟಕದ ಅತ್ಯಂತ ಪ್ರಸಿದ್ಧ ಧಾರ್ಮಿಕ ಸ್ಥಳವಾಗಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಪ್ರತಿ ವರ್ಷ ಕೋಟ್ಯಂತರ ಜನರು ಭೇಟಿ ನೀಡುತ್ತಾರೆ. ಜಾತ್ರೆ ಸಂದರ್ಭದಲ್ಲಿ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಒದಗಿಸುವುದರ ಜತೆಗೆ ಲಕ್ಷಾಂತರ ಜನರಿಗೆ ಸುಗಮ ದರ್ಶನಕ್ಕೆ ಅನುಕೂಲವಾಗುವಂತೆ ಮಾಸ್ಟರ್ ಪ್ಲಾನ್​ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಾಲ್ಕೈದು ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಕುಡಿಯುವ ನೀರು, ನೆರಳು, ಶೌಚಾಲಯ ವ್ಯವಸ್ಥೆ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸಬೇಕಾಗುತ್ತದೆ. ಇವೆಲ್ಲವುಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಮುಜರಾಯಿ ಹಾಗೂ ಪ್ರವಾಸೋದ್ಯಮ ಇಲಾಖೆಗಳ ವತಿಯಿಂದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ.‌ ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ ಲಭ್ಯವಿರುವ 87 ಎಕರೆ ಪ್ರದೇಶದಲ್ಲಿ ಮುಂದಿನ ಹತ್ತು ವರ್ಷಗಳ ಅವಧಿಯಲ್ಲಿ ಹಂತ ಹಂತವಾಗಿ ಅನುಷ್ಠಾನಗೊಳಿಸಬಹುದಾದ ಸಮಗ್ರ ಯೋಜನೆ ರೂಪಿಸಲಾಗುವುದು. ದೇವಸ್ಥಾನವು ಪ್ರತಿವರ್ಷ ಅಂದಾಜು 20 ಕೋಟಿ ರೂ. ಆದಾಯ ಹೊಂದಿದೆ. ಈ ಆದಾಯದಲ್ಲಿ ದೇವಸ್ಥಾನ ನಿರ್ವಹಣೆ ಬಳಿಕ ಉಳಿಯುವ ಹಣವನ್ನು ಮಾಸ್ಟರ್ ಪ್ಲಾನ್​ ಅನುಷ್ಠಾನಕ್ಕೆ ಬಳಸಬಹುದಾಗಿದೆ. ಇದಲ್ಲದೇ‌ ಸರ್ಕಾರದಿಂದಲೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಬಹುದು. ಪ್ರವಾಸೋದ್ಯಮ ಇಲಾಖೆಯ ವತಿಯಿಂದಲೂ ಪ್ರತ್ಯೇಕ ಯೋಜನೆಯನ್ನು ರೂಪಿಸುವ ಮೂಲಕ ಒಟ್ಟಾರೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದಕ್ಕೂ ಮೊದಲು ಅಧಿಕಾರಿಗಳ ಸಭೆಯಲ್ಲಿ‌ ಮಾತನಾಡಿದ ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ಯಲ್ಲಮ್ಮ ದೇವಿ ದೇವಸ್ಥಾನದ ಒಳಹೋಗಲು ಒಂದು ದ್ವಾರ ಮಾತ್ರ ತೆರೆಯಲಾಗಿದೆ. ಆದರೆ, ಗುಡ್ಡಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ನಾಲ್ಕೂ ದ್ವಾರಗಳನ್ನು ತೆರೆದು ಅನುಕೂಲ ಕಲ್ಪಿಸಬೇಕು. ಭಕ್ತರು ಸುಲಭವಾಗಿ ದರ್ಶನ ಪಡೆಯಲು ಅನುಕೂಲವಾಗುವಂತೆ ದೇವಸ್ಥಾನದ ಎರಡು ಕಡೆ ಕಾಲುಸೇತುವೆ ನಿರ್ಮಿಸಬೇಕು. ಭಕ್ತರ ಸಂಖ್ಯೆಗೆ ಅನುಗುಣವಾಗಿ ಹೆಚ್ಚಿನ ಮೂಲಸೌಕರ್ಯ ಒದಗಿಸಬೇಕು ಎಂದು ಸಲಹೆ ನೀಡಿದರು.

ಮುಜರಾಯಿ ಇಲಾಖೆಯ ಆಯುಕ್ತ ಬಸವರಾಜೇಂದ್ರ, ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಪಿ ಬಿ ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ: ಸಚಿವ ಜಿ ಪರಮೇಶ್ವರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.