ಬೆಂಗಳೂರು: ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ನಗರದ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಗೃಹ ಸಚಿವ ಎಂ. ಬಿ. ಪಾಟೀಲ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭೇಟಿ ನೀಡಿದ್ದರು.
ಕಳೆದ 7 ದಿನಗಳಿಂದ ಮಾತೆ ಮಹಾದೇವಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಉಸಿರಾಟದ ಸಮಸ್ಯೆ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೃಹಸಚಿವ ಎಂ. ಬಿ .ಪಾಟೀಲ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭೇಟಿ ನೀಡಿ ಮಾತೆ ಮಹಾದೇವಿಯವರ ಆರೋಗ್ಯ ವಿಚಾರಿಸಿದರು.