ETV Bharat / state

ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ: ಡಿಸಿಎಂ ಡಿ.ಕೆ.ಶಿವಕುಮಾರ್​

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ, ನೀರಿಗಾಗಿ ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು. ಸೌಹಾರ್ದತೆಯಿಂದ ಕುಡಿಯುವ ನೀರು ಹಾಗೂ ರೈತರಿಗೆ ಅನುಕೂಲವಾಗುವ ಯೋಜನೆಗೆ ಸಹಕರಿಸಿ ಎಂದು ಡಿಸಿಎಂ ಡಿ.ಕೆ. ಶಿಮಕುಮಾರ್​ ಅವರು ಮನವಿ ಮಾಡಿಕೊಂಡರು.

may-the-hearts-of-tamil-nadu-be-rich-dcm-dk-shivakumar
ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ: ಡಿಸಿಎಂ ಡಿ.ಕೆ.ಶಿವಕುಮಾರ್​
author img

By

Published : Jun 1, 2023, 4:08 PM IST

Updated : Jun 1, 2023, 4:37 PM IST

ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ: ಡಿಸಿಎಂ ಡಿ.ಕೆ.ಶಿವಕುಮಾರ್​

ಬೆಂಗಳೂರು: ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಮೇಕೆದಾಟು ಯೋಜನೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ ನಂತರ ರಾಜ್ಯ ಬಜೆಟ್​ನಲ್ಲಿ 1 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ, ಅದನ್ನು ಖರ್ಚು ಮಾಡಿಲ್ಲ ಎಂದು ಹೇಳಿದರು.

ನಮಗೆ ತಮಿಳುನಾಡಿನ ಮೇಲೆ ದ್ವೇಷ ಮಾಡುವ, ಯುದ್ಧ ಮಾಡುವ ಉದ್ದೇಶವಿಲ್ಲ. ಅಲ್ಲಿರುವವರು ನಮ್ಮ ಅಣ್ಣತಮ್ಮಂದಿರೆ. ಇಲ್ಲಿಯೂ ಸಾಕಷ್ಟು ಜನರು ವಾಸಿಸುತ್ತಿದ್ದಾರೆ. ನಮಗೆ ಯಾರ ಮೇಲೂ ದ್ವೇಷ, ಅಸೂಯೆ ಇಲ್ಲ ಮಾಡುವ ಸಂದರ್ಭ ಇಲ್ಲ, ಮೇಕೆದಾಟು ನಮ್ಮ ಯೋಜನೆ. ಇದರಿಂದ ತಮಿಳುನಾಡಿಗೂ ಅನುಕೂಲವಾಗುತ್ತದೆ. ಸಮುದ್ರಕ್ಕೆ ಹೋಗುವ ನೀರು ತಡೆದು ಅದನ್ನು ಕಾವೇರಿ ಭಾಗದ ಜನರ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು ಮತ್ತು ರೈತರಿಗೂ ಸಹಾಯ ಮಾಡಬೇಕು ಎಂದು ಹೇಳಿದರು.

ಕಾವೇರಿ ನದಿಗೆ ಆಣೆಕಟ್ಟುಗಳ ಬೀಗ ಕೇಂದ್ರ ಸರ್ಕಾರದ ಕೈಯಲ್ಲಿದೆ. ಅವರಿಗೆ ಯಾವಾಗ ಎಷ್ಟು ನೀರು ಬಿಡಬೇಕು ಎಂದು ಅವರು ತೀರ್ಮಾನಿಸಿ ಬಿಡುತ್ತಾರೆ ಎಂದು ತಿಳಿಸಿದರು. ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಘಟಕ ಆರಂಭಿಸುವುದರಿಂದ ಅವರಿಗೆ ಆಗುವ ತೊಂದರೆ ಏನು? ನಮ್ಮಲ್ಲಿ ನೀರು ಸಂರಕ್ಷಣೆ ಮಾಡಿಕೊಂಡು ಕುಡಿಯುವ ನೀರು ಪೂರೈಸಬಹುದು ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಹೀಗಾಗಿ ತಮಿಳುನಾಡಿನವರು ಆತಂಕಪಡುವ ಅಗತ್ಯವಿಲ್ಲ.

ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆ ಇಲ್ಲ. ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ. ಹೀಗಾಗಿ ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು. ಸೌಹಾರ್ದತೆಯಿಂದ ಕುಡಿಯುವ ನೀರು ಹಾಗೂ ತಮಿಳುನಾಡಿನ ರೈತರಿಗೆ ಅನುಕೂಲವಾಗುವ ಯೋಜನೆಗೆ ಸಹಕರಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಅವರು ಮನವಿ ಮಾಡಿದರು.

ಮೇಕೆದಾಟು ಯೋಜನೆ: ಇದು ಕುಡಿಯುವ ನೀರು, ನೀರಾವರಿ ಹಾಗೂ ವಿದ್ಯುತ್‌ ಉತ್ಪಾದನೆ ಉದ್ದೇಶಕ್ಕಾಗಿ 9,000 ಕೋಟಿ ರೂ. ವೆಚ್ಚದ ಅಣೆಕಟ್ಟು ಯೋಜನೆಯಾಗಿದೆ. ರಾಮನಗರದ ಜಿಲ್ಲೆಯ ಮುಗ್ಗೂರು ಅರಣ್ಯ ವಲಯದ ವಾಚಿಂಗ್‌ ಟವರ್‌ ಗುಡ್ಡೆಯಿಂದ ಹನೂರು ಅರಣ್ಯ ವಲಯದ ಗುಡ್ಡೆಯ ನಡುವೆ ಒಂಟಿಗುಂಡು ಸ್ಥಳದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣ ಆಗಲಿದೆ ಎನ್ನಲಾಗುತ್ತಿದೆ. ಈ ಒಂಟಿಗುಂಡು ಸ್ಥಳ ಮೇಕೆದಾಟು ಮತ್ತು ಸಂಗಮದ ಮಧ್ಯದಲ್ಲಿದೆ. ಅಣೆಕಟ್ಟೆ ನಿರ್ಮಾಣವಾಗುವ ಸ್ಥಳದಿಂದ ಎರಡು ಕಿ.ಮೀ ದೂರದಲ್ಲಿರುವ ಮೇಕೆದಾಟು ಬಳಿ ಜಲ ವಿದ್ಯುತ್‌ ಕೇಂದ್ರ ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ.

ಕಾಂಗ್ರೆಸ್​ ಪಾದಯಾತ್ರೆ: ಕಾಂಗ್ರೆಸ್​​ ಕಳೆದ ವರ್ಷ ಜನವರಿ ಹಾಗೂ ಫೆಬ್ರವರಿಯಲ್ಲಿ ಮೇಕೆದಾಟು ಯೋಜನೆ ಜಾರಿಗಾಗಿ ಸಂಗಮದಿಂದ ಬೆಂಗಳೂರುವರೆಗೆ ಸುಮಾರು 100 ಕಿ.ಮೀ. ಪಾದಯಾತ್ರೆ ನಡೆಸಿತು. ರಾಜ್ಯದ ಘಟಾನುಘಟಿ ಕೈ ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಡಿಕೆಶಿ ಸಹೋದರರು ಪಾದಯಾತ್ರೆಯ ರೂವಾರಿಗಳಾಗಿದ್ದರು.

ಇದನ್ನೂ ಓದಿ: ಸಮಾಜದ ಶಾಂತಿ ಕದಡುವವರ ವಿರುದ್ಧ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Last Updated : Jun 1, 2023, 4:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.