ಬೆಂಗಳೂರು : ಸರ್ಕಾರ ಯಾವಾಗಲಾದರೂ ಬೀಳಬಹುದು ಸನ್ನದ್ಧರಾಗಿ ಎಂದು ಜೆಡಿಎಸ್ ಕಾರ್ಯಕರ್ತರಿಗೆ ಕರೆ ನೀಡಿದ್ದ ನಿಖಿಲ್ ಕುಮಾರಸ್ವಾಮಿ ಅವರ ಮಾತಿಗೆ ಗೃಹ ಸಚಿವ ಎಂ.ಬಿ. ಪಾಟೀಲ್ ತಿರಗೇಟು ನೀಡಿದ್ದು, ಕಾಂಗ್ರೆಸ್ ಕೂಡ ಎಲೆಕ್ಷನ್ಗೆ ಸದಾ ಸಿದ್ಧ. 4 ವರ್ಷದ ಬಳಿಕ ಕಾಂಗ್ರೆಸ್ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುತ್ತದೆ ಎಂದು ಇದೇ ವೇಳೆ, ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಪಾಟೀಲ್, ಸಂಪುಟ ವಿಸ್ತರಣೆ ಆಗುವುದೋ ಅಥವಾ ಪುನರ್ರಚನೆ ಆಗುತ್ತೋ ಎನ್ನುವ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ಇವೆಲ್ಲವೂ ಕಾಂಗ್ರೆಸ್ ಹೈ ಕಮಾಂಡ್ ಜೊತೆಗೆ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಸೇರಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.