ETV Bharat / state

ಜೋಳ ಉತ್ಪಾದನೆ ಉತ್ತೇಜಿಸಿ: ಪ್ರಧಾನಿ ಹಾಗೂ ಮುಖ್ಯಮಂತ್ರಿಗೆ ಎಂ.ಬಿ.ಪಾಟೀಲ್ ಪತ್ರ - ಸಿಎಂ ಬಿಎಸ್​ವೈಗೆ ಎಂ. ಬಿ. ಪಾಟೀಲ್ ಪತ್ರ

ಜೋಳದ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉತ್ತೇಜನ ನೀಡುವಂತೆ ಮಾಜಿ ಸಚಿವ ಎಂ.ಬಿ. ಪಾಟೀಲ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿ ಹಾಗೂ ಸಿಎಂಗೆ ಎಂ.ಬಿ. ಪಾಟೀಲ್ ಪತ್ರ
author img

By

Published : Nov 8, 2019, 6:34 PM IST

ಬೆಂಗಳೂರು: ಜೋಳದ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉತ್ತೇಜನ ನೀಡುವಂತೆ ಮಾಜಿ ಸಚಿವ ಎಂ.ಬಿ. ಪಾಟೀಲ್ ಪ್ರಧಾನಿ ನರೇಂದ್ರ ಮೋದಿ ಹಾಗು ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಜೋಳ ಪ್ರಮುಖ ಆಹಾರ ಪದ್ಧತಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಜೋಳ ಉತ್ಪಾದನೆ ಕುಂಠಿತವಾಗುತ್ತಿದೆ. ಜೋಳದ ಸ್ಥಾನವನ್ನು ಗೋಧಿ ಮತ್ತು ಅಕ್ಕಿ ಪಡೆಯುತ್ತಿದೆ. ಇದರಿಂದ ಉತ್ತರ ಕರ್ನಾಟಕದ ಆಹಾರ ಸಂಸ್ಕೃತಿ ವಿನಾಶದ ಅಂಚಿಗೆ ತಲುಪಿದೆ. ಹೀಗಾಗಿ ಸರ್ಕಾರ ಮಧ್ಯ ಪ್ರವೇಶಿಸಿ ಜೋಳ ಬೆಳೆಯುವ ರೈತರಿಗೆ ಹೆಚ್ಚಿನ ಉತ್ತೇಜನ ನೀಡಿ ಬೆಂಬಲ ಬೆಲೆ ನಿಗದಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಜೋಳ ಬೆಳೆಯಲು ಪ್ರತಿ ಎಕರೆಗೆ 10 ರಿಂದ 12 ಸಾವಿರ ರೂಪಾಯಿ ಖರ್ಚಾಗುತ್ತದೆ. ಆದರೆ ಎಕರೆಗೆ 4 ರಿಂದ 6 ಸಾವಿರ ಮಾತ್ರ ಆದಾಯ ಬರುತ್ತದೆ. ಪ್ರತಿ ಎಕರೆಗೆ ಸುಮಾರು 6 ಸಾವಿರ ರೂ. ನಷ್ಟವನ್ನು ರೈತರು ಅನುಭವಿಸುತ್ತಿದ್ದು, ಈ ಹಿನ್ನೆಲೆ ರೈತರು ಜೋಳ ಬೆಳೆಯುವುದನ್ನು ಬಿಟ್ಟು ಪರ್ಯಾಯ ಬೆಳೆಗಳತ್ತ ಮುಖ‌ ಮಾಡಿದ್ದಾರೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಉತ್ಪಾದನಾ ವೆಚ್ಚ ಆಧಾರಿತವಾಗಿ ಜೋಳದ ಬೆಳೆಗೆ ಕನಿಷ್ಠ 4 ರಿಂದ 5 ಸಾವಿರ ರೂಪಾಯಿ ಬೆಂಬಲ ಬೆಲೆ ಘೋಷಿಸಬೇಕು. ಆ ಮೂಲಕ ಉತ್ತರ ಕರ್ನಾಟಕ ಭಾಗದ ಪ್ರಮುಖ ಆಹಾರ ಸಂಸ್ಕೃತಿ ಬೆಳೆಯಾದ ಜೋಳವನ್ನು ಉಳಿಸಲು ಅಗತ್ಯ ಕ್ರಮ ಜರುಗಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

Intro:Body:KN_BNG_01_MBPATIL_LETTER_SCRIPT_7201951

ಜೋಳ ಉತ್ಪಾದನೆ ಉತ್ತೇಜಿಸಿ ಉ.ಕರ್ನಾಟಕದ ಆಹಾರ ಸಂಸ್ಕೃತಿ ಉಳಿಸಿ: ಎಂ.ಬಿ.ಪಾಟೀಲ್ ಪತ್ರ

ಬೆಂಗಳೂರು: ಜೋಳ ಉತ್ಪಾದನೆ ಕುಂಠಿತವಾಗುತ್ತಿದ್ದು, ಅದರ ಉತ್ಪಾದನೆ‌ ಹೆಚ್ಚಿಸುವ ನಿಟ್ಟಿನಲ್ಲಿ ಉತ್ತೇಜನ ನೀಡುವಂತೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರಧಾನಿ ಮೋದಿ ಹಾಗೂ ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಜೋಳ ಪ್ರಮುಖ ಆಹಾರ ಪದ್ಧತಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಜೋಳ ಉತ್ಪಾದನೆ ಕುಂಠಿತವಾಗುತ್ತಿರುವ ಹಿನ್ನೆಲೆ ಜೋಳದ ಸ್ಥಾನವನ್ನು ಗೋಧಿ ಮತ್ತು ಅಕ್ಕಿ ಪಡೆಯುತ್ತಿದೆ. ಇದರಿಂದ ಉತ್ತರ ಕರ್ನಾಟಕದ ಆಹಾರ ಸಂಸ್ಕೃತಿಯೇ ವಿನಾಶದ ಅಂಚಿಗೆ ಬಂದಿದೆ. ಹೀಗಾಗಿ ಸರ್ಕಾರ ಮಧ್ಯಪ್ರವೇಶಿಸಿ ಜೋಳ ಬೆಳೆಯುವ ರೈತರಿಗೆ ಹೆಚ್ಚಿನ ಉತ್ತೇಜನ ನೀಡಿ, ಬೆಂಬಲ ಬೆಲೆ ನಿಗದಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಬೆಳೆಯುವ ಪ್ರತಿ ಎಕರೆ ಜೋಳಕ್ಕೆ 10,000-12,000 ರು. ಖರ್ಚಾಗುತ್ತದೆ. ಆದಾಯ ಎಕರೆಗೆ 4,000-6,000 ರು. ಆಗುತ್ತದೆ. ಪ್ರತಿ ಎಕರೆಗೆ ಸುಮಾರು 6,000 ರು. ನಷ್ಟ ಅನುಭವಿಸುತ್ತಿರುವ ಹಿನ್ನೆಲೆ ರೈತರು ಜೋಳ ಬೆಳೆಯುವುದನ್ನು ಬಿಟ್ಟು, ಪರ್ಯಾಯ ಬೆಳೆಗಳತ್ತ ಮುಖ‌ ಮಾಡಿದ್ದಾರೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಉತ್ಪಾದನಾ ವೆಚ್ಚ ಆಧಾರಿತವಾಗಿ ಜೋಳದ ಬೆಳೆಗೆ ಕನಿಷ್ಠ 4-5 ಸಾವಿರು ರು. ಬೆಂಬಲ ಬೆಲೆ ಘೋಷಿಸಬೇಕು. ಆ ಮೂಲಕ ಉತ್ತರ ಕರ್ನಾಟಕ ಭಾಗದ ಪ್ರಮುಖ ಆಹಾರ ಸಂಸ್ಕೃತಿಯಾದ ಬೆಳೆ ಜೋಳವನ್ನು ಉಳಿಸಲು ಅಗತ್ಯ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.