ETV Bharat / state

ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಶತಸಿದ್ದ: ಡಾ.ಕೆ.ಸುಧಾಕರ್ ವಿಶ್ವಾಸ

ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುವುದು ಶತಸಿದ್ದ ಎಂದು ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಬಂದಿದ್ದಾರೆ.

bng
author img

By

Published : Oct 30, 2019, 12:11 PM IST

ಬೆಂಗಳೂರು: ಯಾರು ಏನೇ ಮಾಡಿದರೂ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುವುದು ಶತಸಿದ್ದ ಎಂದು ಚಿಕ್ಕಬಳ್ಳಾಪುರ ಅನರ್ಹ ಶಾಸಕ ಡಾ. ಕೆ. ಸುಧಾಕರ್ ಪುನರುಚ್ಛರಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಯಾರು ಏನೇ ಮಾಡಿದರೂ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಬರಲಿದೆ. ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಡಿಯೊ, ಮೆಡಿಕಲ್ ಕಾಲೇಜು ವಿಷಯದಿಂದ ಸಾರ್ವಜನಿಕರ ಹಾಗೂ ಮಾಧ್ಯಮದವರ ದಿಕ್ಕು ತಪ್ಪಿಸಲು ಹಾಗೂ ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನವಾಗಿದೆ. ಕಿಡಿಗೇಡಿಗಳ ಇಂತಹ ಪ್ರಯತ್ನಗಳಿಗೆ ನಮ್ಮ ಪ್ರಜ್ಞಾವಂತ ಜನರು ಕಿವಿಕೊಡುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.

bng
ಡಾ.ಕೆ.ಸುಧಾಕರ್ ಟ್ವೀಟ್

ಈ ವಿಚಾರವಾಗಿಯೇ ಅವರು ನಿನ್ನೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿ ಬಂದಿದ್ದಾರೆ. ಯಾವುದೇ ಕಾರಣಕ್ಕೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಒತ್ತಡಕ್ಕೆ ಮಣಿದು ಕಾಲೇಜು ಸ್ಥಳಾಂತರ ಮಾಡಬೇಡಿ ಎಂದು ಮನವಿ ಮಾಡಿ ಬಂದಿದ್ದಾರೆ.

bng
ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಡಾ.ಕೆ.ಸುಧಾಕರ್

2015-16ನೇ ಸಾಲಿನ ಬಜೆಟ್​ನಲ್ಲಿ ಚಿಕ್ಕಬಳ್ಳಾಪುರಕ್ಕೆ ಮಂಜೂರಾದ ಕಾಲೇಜಿಗೆ ಹಣ ಬಿಡುಗಡೆ ಮಾಡುವಂತೆ ತಾವು 2018ರ ಆ.18ರಂದು ಅಂದಿನ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬರೆದಿದ್ದ ಪತ್ರವನ್ನು ಕೂಡ ಸುಧಾಕರ್ ಟ್ವೀಟ್ ಮಾಡಿದ್ದರು. ಇಂದು ಮತ್ತೊಮ್ಮೆ ಟ್ವೀಟ್ ಮಾಡಿ ಜನರಲ್ಲಿ ತಪ್ಪು ಸಂದೇಶ ಬರುವುದು ಬೇಡ ಎಂದು ಮನವಿ ಮಾಡಿದ್ದಾರೆ.

Intro:newsBody:ಯಾರು ಏನೇ ಮಾಡಿದರು ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುವುದು ಶತಸಿದ್ದ: ಸುಧಾಕರ್

ಬೆಂಗಳೂರು: ಯಾರು ಏನೇ ಮಾಡಿದರು ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುವುದು ಶತಸಿದ್ದ ಎಂದು ಚಿಕ್ಕಬಳ್ಳಾಪುರ ಅನರ್ಹ ಶಾಸಕ ಡಾ. ಕೆ. ಸುಧಾಕರ್ ಪುನರುಚ್ಛರಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಯಾರು ಏನೇ ಮಾಡಿದರೂ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಬರಲಿದೆ. ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಡಿಯೊ, ಮೆಡಿಕಲ್ ಕಾಲೇಜು ವಿಷಯದಿಂದ ಸಾರ್ವಜನಿಕರ ಹಾಗೂ ಮಾಧ್ಯಮದವರ ದಿಕ್ಕು ತಪ್ಪಿಸಲು ಹಾಗೂ ನನ್ನ ಹೆಸರಿಗೆ ಮಸಿ ಬಳಿಯುವ ಪ್ರಯತ್ನವಾಗಿದೆ. ಕಿಡಿಗೇಡಿಗಳ ಇಂತಹ ಪ್ರಯತ್ನಗಳಿಗೆ ನಮ್ಮ ಪ್ರಜ್ಞಾವಂತ ಜನರು ಕಿವಿಕೊಡುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.
ಈ ವಿಚಾರವಾಗಿಯೇ ಅವರು ನಿನ್ನೆ ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿ ಮಾಡಿ ಮನವಿ ಕೂಡ ಮಾಡಿಕೊಂಡು ಬಂದಿದ್ದಾರೆ. ಯಾವುದೇ ಕಾರಣಕ್ಕೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಒತ್ತಡಕ್ಕೆ ಮಣಿದು ಕಾಲೇಜನ್ನು ಸ್ಥಳಾಂತರ ಮಾಡಬೇಡಿ ಎಂದು ಮನವಿ ಮಾಡಿ ಬಂದಿದ್ದಾರೆ.
2015-16 ನೇ ಸಾಲಿನ ಬಜೆಟ್ನಲ್ಲಿ ಚಿಕ್ಕಬಳ್ಳಾಪುರಕ್ಕೆ ಮಂಜೂರಾದ ಕಾಲೇಜಿಗೆ ಹಣ ಬಿಡುಗಡೆ ಮಾಡುವಂತೆ ತಾವು 2018ರ ಆ.18ರಂದು ಅಂದಿನ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬರೆದಿದ್ದ ಪತ್ರವನ್ನು ಕೂಡ ಸುಧಾಕರ್ ಟ್ವೀಟ್ ಮಾಡಿದ್ದರು. ಇಂದು ಮತ್ತೊಮ್ಮೆ ಟ್ವೀಟ್ ಮಾಡಿ ಜನರಲ್ಲಿ ತಪ್ಪು ಸಂದೇಶ ಬರುವುದು ಬೇಡ ಎಂದು ಮನವಿ ಮಾಡಿದ್ದಾರೆ.

Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.