ಬೆಂಗಳೂರು: ವೈದ್ಯಕೀಯ/ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ 2019ನೇ ಸಾಲಿನ ಎರಡನೇ ಸುತ್ತಿನ ಸೀಟು ಹಂಚಿಕೆಯ ಸಂಬಂಧ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ (kea.kar.nic.in)ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಜುಲೈ 24ರಿಂದ 26ರವರೆಗೆ ಅಭ್ಯರ್ಥಿಗಳು ತಮ್ಮ ಇಚ್ಛೆ- ಆಯ್ಕೆಗಳನ್ನು ಮಾರ್ಪಡಿಸಬಹುದಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅಪ್ಡೇಟ್ ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ಗೆ ಭೇಟಿ ನೀಡುತ್ತಿರುವಂತೆ ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.