ETV Bharat / state

ರಾಜ್ಯದಲ್ಲಿ ಹೆಚ್ಚುವರಿ 3 ಲ್ಯಾಬ್​ ಸ್ಥಾಪನೆ.. ಟ್ವೀಟ್​ ಮೂಲಕ ಸಚಿವ ಡಾ.ಸುಧಾಕರ್ ಮಾಹಿತಿ - Medical Education Minister Dr K Sudhakar tweet

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೇ ಇದ್ದು ಇದರ ಬೆಳವಣಿಗೆ ಪ್ರಮಾಣವನ್ನು ಕಡಿಮೆ ಮಾಡಲು ಸರ್ಕಾರ ಸನ್ನದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

COVID-19  test laboratory
ರಾಜ್ಯದಲ್ಲಿ ಹೆಚ್ಚುವರಿ ಮೂರು ಲ್ಯಾಬ್​ಗಳ ಸ್ಥಾಪನೆ
author img

By

Published : May 1, 2020, 4:52 PM IST

ಬೆಂಗಳೂರು: ಕೊರೊನಾ ಹರಡುವಿಕೆ ಹೆಚ್ಚುತ್ತಿದೆ. ಸೋಂಕಿತರ ಸಂಖ್ಯೆ ದಿನೇದಿನೆ ಏರುತ್ತಲಿದೆ. ಹಾಗಾಗಿ ಇದನ್ನು ಹತ್ತಿಕ್ಕುವ ನಿಟ್ಟಿನಲ್ಲಿ‌ ಇದೀಗ ಕರ್ನಾಟಕದಲ್ಲಿ 26 ಕೋವಿಡ್-19 ಪರೀಕ್ಷಾ ಪ್ರಯೋಗಾಲಯಗಳನ್ನು ತೆರೆಯಲಾಗಿದೆ. ತುಮಕೂರು, ಗದಗ, ವಿಜಯಪುರಗಳಲ್ಲೂ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಸ್ಥಾಪನೆ ಮಾಡಲಾಗಿದೆ. ಮೇ ಅಂತ್ಯದೊಳಗೆ ರಾಜ್ಯದಲ್ಲಿ 60 ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಹೊಂದುವುದು ನಮ್ಮ ಗುರಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಟ್ವೀಟ್​ ಮಾಡಿದ್ದಾರೆ.

ರಾಜ್ಯದಲ್ಲಿ ಈಗ ದಿನಕ್ಕೆ 5,000 ಪರೀಕ್ಷೆಗಳನ್ನು ನಡೆಸುವ ಸಾಮರ್ಥ್ಯ ಲಭ್ಯವಾದಂತಾಗಿದ್ದು, ವೈದ್ಯಕೀಯ ಸೌಲಭ್ಯ ಹೆಚ್ಚಳ ಮತ್ತು ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ. ಪ್ರಸ್ತುತ ಆರ್​​ಟಿ‌ಪಿ‌ಸಿ‌ಆರ್​ ಲ್ಯಾಬ್ - 15, ಸಿ‌ಬಿ‌ಎನ್​ಎ‍‍ಎ‍ಟಿ - 03 ಮತ್ತು ಖಾಸಗಿಯ 08 ಲ್ಯಾಬ್​ಗಳು ಕಾರ್ಯ ನಿರ್ವಹಿಸುತ್ತಿವೆ.

Medical Education Minister Dr K Sudhakar tweet about COVID-19  test laboratory
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್

ಫೆಬ್ರವರಿ ಆರಂಭದಲ್ಲಿ 2 ಲ್ಯಾಬ್​​ಗಳಿದ್ದ ಕರ್ನಾಟಕದಲ್ಲಿ ಈಗ 26 ಲ್ಯಾಬ್​​ಗಳು ಕಾರ್ಯನಿರ್ವಹಿಸುತ್ತಿವೆ. ಇನ್ನು ಮೇ ಅಂತ್ಯದೊಳಗೆ 60 ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳು ಕಾರ್ಯ ನಿರ್ವಹಿಸಲಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ 2 ಪ್ರಯೋಗಾಲಯ ಹೊಂದುವುದು ಸರ್ಕಾರದ ಗುರಿ ಎಂದು ಡಾ.ಸುಧಾಕರ್ ತಿಳಿಸಿದ್ದಾರೆ. ಇದರಿಂದಾಗಿ ತ್ವರಿತಗತಿಯಲ್ಲಿ ಪಾಸಿಟಿವ್ ಪ್ರಕರಣಗಳನ್ನು ಗುರುತಿಸಿ ಪ್ರತ್ಯೇಕಿಸಲು ಸಾಧ್ಯವಾಗುತ್ತಿದ್ದು, ರಾಜ್ಯದಲ್ಲಿ ಕೊರೊನಾ ವೈರಾಣು ಹರಡದಂತೆ ತಡೆಗಟ್ಟಲು ಇದು ಬಹಳ ಮಟ್ಟಿಗೆ ಸಹಕಾರಿಯಾಗಿದೆ.

ಕೋವಿಡ್ ಸಂಕಷ್ಟಕ್ಕೆ 4T ಯೋಜನೆ : 4T (ಟ್ರೇಸ್, ಟ್ರ್ಯಾಕ್, ಟೆಸ್ಟ್ ಮತ್ತು ಟ್ರೀಟ್) ಯೋಜನೆಯೊಂದಿಗೆ ಕರ್ನಾಟಕವು ಅತ್ಯಂತ ಸಮರ್ಥವಾಗಿ ಕೋವಿಡ್ ಸಂಕಷ್ಟವನ್ನು ಎದುರಿಸುತ್ತಿದ್ದು ಹೆಚ್ಚಿನ ಪ್ರಯೋಗಾಲಯಗಳನ್ನು ಹೊಂದುವುದರಿಂದ ಹೆಚ್ಚು ಟೆಸ್ಟ್‌ಗಳನ್ನು ಕಡಿಮೆ ಅವಧಿಯಲ್ಲಿ ನಡೆಸಬಹುದಾಗಿದೆ. ಇದರಿಂದ ಚಿಕಿತ್ಸೆಗೆ ಅನುಕೂಲವಾಗಿದ್ದು ಕೋವಿಡ್ ನಿಯಂತ್ರಿಸುವ ಮತ್ತು ಸೋಂಕಿತರನ್ನು ಗುಣಮುಖರನ್ನಾಗಿ ಮಾಡುವ ನಿಟ್ಟಿನಲ್ಲಿ ಇದೊಂದು ಮಹತ್ವದ ಮೈಲಿಗಲ್ಲಾಗಿದೆ ಅಂತ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.