ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳಿಗೆ ಸರ್ಕಾರದ ಪಾಲಿನ ಬೆಡ್ಗಳು ಸಿಗದ ಹಿನ್ನೆಲೆ ಖಾಸಗಿ ಆಸ್ಪತ್ರೆಗಳ ಮಾಲೀಕರೊಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸಭೆ ನಡೆಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದ ಪಾಲಿಗೆ 3700ಕ್ಕೂ ಹೆಚ್ಚು ಬೆಡ್ಗಳನ್ನು ನೀಡಬೇಕಿತ್ತು. ಆದರೆ ಖಾಸಗಿ ಆಸ್ಪತ್ರೆಗಳು ಇದುವರೆಗೆ ಸಮರ್ಪಕವಾಗಿ ಬೆಡ್ ನೀಡದ ಹಿನ್ನೆಲೆ ಖಾಸಗಿ ಆಸ್ಪತ್ರೆ ಮಾಲೀಕರ ಜೊತೆ ಚರ್ಚೆ ನಡೆಸಿದರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಉಪಸ್ಥಿತರಿದ್ದರು. ಅಪೋಲೋ, ಫೋರ್ಟೀಸ್, ಸ್ಪರ್ಶ್, ವಿಕ್ರಂ, ಸಕ್ರಾ, ಸೈಂಟ್ ಜಾನ್ಸ್ ಆಸ್ಪತ್ರೆ ಸೇರಿ ಹಲವು ಖಾಸಗಿ ಆಸ್ಪತ್ರೆ ಮಾಲೀಕರು ವೈದ್ಯರು ಭಾಗಿಯಾಗಿದ್ದರು.
ಸರ್ಕಾರಕ್ಕೆ ಮೀಸಲಿಟ್ಟಿದ್ದ ಬೆಡ್ಗಳನ್ನು ನೀಡಲು ಹಿಂದೇಟು ಹಾಕುತ್ತಿರುವ ಖಾಸಗಿ ಆಸ್ಪತ್ರೆಗಳು ಇಂದಿನ ಸಭೆಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಖಾಸಗಿ ಆಸ್ಪತ್ರೆ ವೈದ್ಯರ ಸಂಘದ ಅಧ್ಯಕ್ಷ ಡಾ. ರವೀಂದ್ರ ಕೂಡ ಭಾಗಿಯಾಗಿದ್ದರು.