ETV Bharat / state

ಗುತ್ತಿಗೆ- ಹೊರಗುತ್ತಿಗೆ ನೌಕರರ 14 ದಿನಗಳ ಮುಷ್ಕರ ಅಂತ್ಯ - Medical employees end their strike

14 ದಿನಗಳಿಂದ ನಡೆಸುತ್ತಿದ್ದ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಅನಿರ್ಧಿಷ್ಟಾವಧಿ ಕೆಲಸ ಸ್ಥಗಿತ ಹೋರಾಟ ಮುಷ್ಕರವನ್ನು ಮುಂದೂಡಿಕೆ ಮಾಡಲಾಗಿದೆ.

Meeting
Meeting
author img

By

Published : Oct 7, 2020, 10:45 PM IST

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ ಹಿನ್ನೆಲೆಯಲ್ಲಿ 14 ದಿನಗಳಿಂದ ನಡೆಸುತ್ತಿದ್ದ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಅನಿರ್ಧಿಷ್ಟಾವಧಿ ಕೆಲಸ ಸ್ಥಗಿತ ಹೋರಾಟ ಮುಷ್ಕರ ತಾತ್ಕಾಲಿಕವಾಗಿ ಒಂದು ತಿಂಗಳ ಕಾಲ ಮುಂದೂಡಿಕೆ ಮಾಡಲಾಗಿದೆ.

ಈ ಕುರಿತು ಟೀಟ್ವ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ನನ್ನ ಮನವಿಗೆ ಸ್ವಂದಿಸಿ ಕರ್ತವ್ಯಕ್ಕೆ ಮರಳಿದ್ದಾರೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅವರ ಬೇಡಿಕೆಗಳಿಗೆ ಸರ್ಕಾರ ಪೂರಕವಾಗಿ ಸ್ವಂದಿಸಲಿದೆ ಎಂದು ತಿಳಿಸಿದರು.‌

ಕೆಲವು ಪ್ರಮುಖ ಬೇಡಿಕೆಗಳ ಮೇಲೆ ಆದೇಶಗಳನ್ನು ಹೊರಡಿಸಿ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಒಂದು ತಿಂಗಳ ಸಮಯ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಚಾಲ್ತಿಯಲ್ಲಿರುವ ಮುಷ್ಕರವನ್ನು ಒಂದು ತಿಂಗಳ ಕಾಲ ಮುಂದುಡಲಾಗಿದೆ ಎಂದು ಸಂಘದ ಅಧ್ಯಕ್ಷ ವಿಶ್ವಾರಾಧ್ಯ ತಿಳಿಸಿದ್ದಾರೆ. ನಾಳೆಯ ಒಳಗೆ ಕರ್ತವ್ಯಕ್ಕೆ ಹಾಜರಾಗಲು ರಾಜ್ಯ ಸಮಿತಿಯು ಒಮ್ಮತದ ನಿರ್ಣಯ ಮಾಡಿದೆ.

ನಿನ್ನೆ ಸಚಿವ ಶ್ರೀರಾಮುಲು ಹಾಗೂ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಘದ ಅಧಿಕೃತ ಮುಷ್ಕರದ ದಿನಗಳಲ್ಲಿ ಕಡಿತವಾದ ವೇತನವನ್ನು ಪಾವತಿಸಲು ಕ್ರಮಕೈಗೊಳ್ಳಲು ಒಪ್ಪಲಾಗಿದೆ.ಮುಷ್ಕರದ ಸಮಯದಲ್ಲಿ ಸೇವೆಯಿಂದ ವಜಾಗೊಂಡಿರುವ, ನೋಟಿಸ್ ನೀಡಿರುವುದನ್ನು ಹಿಂಪಡೆಯಲು ಒಪ್ಪಿಗೆ ಸೂಚಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.