ETV Bharat / state

ವೈದ್ಯಕೀಯ ವೃತ್ತಿಯಲ್ಲಿ ನಂಬಿಕೆ, ವೃತ್ತಿಪರತೆ ಹೊಂದಿರಬೇಕು: ಹೈಕೋರ್ಟ್

ವೈದ್ಯಕೀಯ ವೃತ್ತಿಯನ್ನು ಕೈಗೊಳ್ಳುವವರು ಉತ್ತಮ ನಡತೆ, ಗುಣ ಮತ್ತು ಬದ್ಧತೆಗೆ ಆದರ್ಶ ಉದಾಹರಣೆಯಾಗಿರಬೇಕು ಎಂದು ಹೈಕೋರ್ಟ್​ ಹೇಳಿದೆ.

medical-profession-should-have-faith-and-professionalism-says-high-court
ವೈದ್ಯಕೀಯ ವೃತ್ತಿಯಲ್ಲಿ ನಂಬಿಕೆ, ವೃತ್ತಿಪರತೆ ಹೊಂದಿರಬೇಕು: ಹೈಕೋರ್ಟ್
author img

By ETV Bharat Karnataka Team

Published : Sep 26, 2023, 8:15 PM IST

ಬೆಂಗಳೂರು: ಆರೋಗ್ಯ ರಕ್ಷಣೆಯಂತಹ ಜವಾಬ್ದಾರಿ ಹೊತ್ತಿರುವ ವೈದ್ಯಕೀಯ ವೃತ್ತಿಯಲ್ಲಿರುವವರು ನಂಬಿಕೆ, ವೃತ್ತಿಪರ ಮಾನದಂಡಗಳನ್ನು ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬಿಎಸ್​ಸಿ ಪದವಿ, ಪರ್ಯಾಯ ವೈದ್ಯಕೀಯ ಡಿಪ್ಲೊಮಾ ಹಾಗೂ ಕೋಲ್ಕತ್ತಾದ ಭಾರತೀಯ ಪರ್ಯಾಯ ವೈದ್ಯಕೀಯ ಮಂಡಳಿಯಿಂದ ಎಂಡಿ ಪದವಿ ಪಡೆದಿದ್ದ ಉಡುಪಿಯ ಮೋಹನ್ ಭಟ್ಟ ಎಂಬುವವರು ಕ್ಲಿನಿಕ್ ನೋಂದಣಿಗೆ ಜಿಲ್ಲಾಧಿಕಾರಿ ಅನುಮತಿ ನೀಡದ ಕ್ರಮ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಈ ಮೇಲ್ಮನವಿ ಅರ್ಜಿ ಆಲಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ವೈದ್ಯಕೀಯ ವೃತ್ತಿಯನ್ನು ಕೈಗೊಳ್ಳುವವರು ಉತ್ತಮ ನಡತೆ, ಗುಣ ಮತ್ತು ಬದ್ಧತೆಗೆ ಆದರ್ಶ ಉದಾಹರಣೆಯಾಗಿರಬೇಕು ಎಂದು ಪೀಠ ಸಲಹೆ ನೀಡಿ ಆದೇಶಿಸಿದೆ. ಜತೆಗೆ, ಕೆಪಿಎಂಇ ಕಾಯಿದೆ ಸೆಕ್ಷನ್ 5(9)(ಬಿ) ಪ್ರಕಾರ ಕ್ಲಿನಿಕ್ ನೋಂದಣಿಗೆ ರಾಜ್ಯ ವೈದ್ಯಕೀಯ ಮಂಡಳಿ ನೀಡಿರುವ ಸರ್ಟಿಫಿಕೆಟ್ ಮತ್ತು ಇತರ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂಬ ನಿಯಮವಿದೆ. ಆದರೆ, ಅರ್ಜಿದಾರರು ಸಲ್ಲಿಸಿಲ್ಲ. ಈ ಎಲ್ಲ ಅಂಶಗಳನ್ನು ಏಕ ಸದಸ್ಯಪೀಠ ದಾಖಲಿಸಿದೆ. ಹಾಗಾಗಿ ಆ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಪೀಠ ಹೇಳಿದೆ.

ಅಲೋಪತಿ ವಿಭಾಗದಲ್ಲಿ ವೈದ್ಯಕೀಯ ವೃತ್ತಿ ಕೈಗೊಳ್ಳುವವರಿಗೆ ಭಾರತೀಯ ವೈದ್ಯಕೀಯ ಮಂಡಳಿ ಪ್ರಮಾಣಪತ್ರ ನೀಡುತ್ತದೆ. ಅಂತೆಯೇ ಪ್ರತಿಯೊಂದು ವೈದ್ಯಕೀಯ ವಿಭಾಗಕ್ಕೂ ಒಂದೊಂದು ನಿಯಂತ್ರಣ ಸಂಸ್ಥೆಗಳಿದ್ದು, ಅವುಗಳ ಪ್ರಮಾಣ ಪತ್ರವನ್ನು ಪಡೆಯಲೇಬೇಕಾಗುತ್ತದೆ. ಜತೆಗೆ, ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ತೊಡಗಿರುವವರು ಜನರ ವಿಶ್ವಾಸ ಉಳಿಸಿಕೊಳ್ಳಬೇಕಾದರೆ ಅವರ ನಡವಳಿಕೆ ಕೂಡ ಮುಖ್ಯವಾಗಿರುತ್ತದೆ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ.

ಪ್ರಕರಣದ ಹಿನ್ನೆಲೆ ಏನು?: ಅರ್ಜಿದಾರರು ಬಿಎಸ್​ಸಿ ಪದವಿ ಹಾಗೂ ಪರ್ಯಾಯ ವೈದ್ಯಕೀಯ ಡಿಪ್ಲೊಮಾ ಮತ್ತು ಕೋಲ್ಕತ್ತಾದ ಭಾರತೀಯ ಪರ್ಯಾಯ ವೈದ್ಯಕೀಯ ಮಂಡಳಿಯಿಂದ ಎಂಡಿ ಪದವಿ ಪಡೆದಿರುವುದಾಗಿ ಹೇಳಿಕೊಂಡು ಉಡುಪಿ ಪಟ್ಟಣದಲ್ಲಿ ಕ್ಲಿನಿಕ್ ಆರಂಭಿಸಲು 2010ರಲ್ಲಿ ಅರ್ಜಿ ಸಲ್ಲಿಸಿದ್ದರು.

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯಿದೆ 2007ರಡಿ ಜಿಲ್ಲಾಧಿಕಾರಿಗಳ ಮುಂದೆ ಅರ್ಜಿ ಸಲ್ಲಿಸಿ, ಕ್ಲಿನಿಕ್ ನೋಂದಣಿಗೆ ಕೋರಿದ್ದರು. ಜಿಲ್ಲಾಧಿಕಾರಿಗಳ ಕಚೇರಿಯಿಂದ ಸರಣಿ ನೋಟಿಸ್​ಗಳನ್ನು ಕಳುಹಿಸಿ ರಾಜ್ಯ ವೈದ್ಯಕೀಯ ಮಂಡಳಿ ನೀಡಿರುವ ವೈದ್ಯಕೀಯ ವೃತ್ತಿಪರರು ಪ್ರಮಾಣಪತ್ರ ಸಲ್ಲಿಸುವಂತೆ ಕೋರಿದ್ದರು. ಆದರೆ, ಅವರು ಅದನ್ನು ಸಲ್ಲಿಸಿರಲಿಲ್ಲ, ಹಾಗಾಗಿ ಜಿಲ್ಲಾಧಿಕಾರಿಗಳು 2018ರ ಡಿಸೆಂಬರ್ 6ರಂದು ಅವರ ಅರ್ಜಿ ತಿರಸ್ಕರಿಸಿರುವುದಾಗಿ ಹಿಂಬರಹ ನೀಡಿದ್ದರು.

ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಏಕ ಸದಸ್ಯ ಪೀಠದ ಮೊರೆ ಹೋಗಿದ್ದರು. 2023ರ ಮಾ.13ರಂದು ಏಕ ಸದಸ್ಯ ಪೀಠ ಕೂಡ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಅರ್ಜಿದಾರರು, ತಮ್ಮ ವಿಭಾಗ ಆಯುಷ್ ಇಲಾಖೆಯ ವ್ಯಾಪ್ತಿಗೆ ಒಳಪಡುವುದಿಲ್ಲ. ಆದರೆ ತಾನು ವೈದ್ಯಕೀಯ ವೃತ್ತಿಯನ್ನು ಕೈಗೊಳ್ಳಲು ಎಲ್ಲಾ ಅರ್ಹತೆ ಹೊಂದಿದ್ದೇನೆ ಅರ್ಜಿಯಲ್ಲಿ ಎಂದು ವಾದಿಸಿದ್ದರು.

ಇದನ್ನೂ ಓದಿ: ಕೆಎಂಸಿ ಕಾಯಿದೆಯಲ್ಲಿ ವ್ಯಕ್ತಿ, ರಾಜ್ಯ ಸರ್ಕಾರ ಪದಗಳನ್ನು ಒಂದೇ ರೀತಿಯಲ್ಲಿ ಅರ್ಥೈಸಲಾಗದು: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.