ETV Bharat / state

ಮೆಡಿಕಲ್ ಸೀಟ್ ಕೊಡಿಸುವುದಾಗಿ ವಂಚನೆ.. ಹೈದರಾಬಾದ್ ಮೂಲದ ಆರೋಪಿ ಬಂಧನ - ನಂಬಿಸಿ ವಂಚನೆ

ಮೆಡಿಕಲ್​ ಸೀಟ್​ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮೆಡಿಕಲ್ ಸೀಟ್ ಕೊಡಿಸುವುದಾಗಿ ವಂಚನೆ
ಮೆಡಿಕಲ್ ಸೀಟ್ ಕೊಡಿಸುವುದಾಗಿ ವಂಚನೆ
author img

By ETV Bharat Karnataka Team

Published : Oct 31, 2023, 1:38 PM IST

ಬೆಂಗಳೂರು: ವೈದ್ಯಕೀಯ ಶಿಕ್ಷಣದ ಸೀಟು ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯನ್ನು ಸಂಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ಶರತ್ ಗೌಡ ಬಂಧಿತ ಆರೋಪಿ.

ಹೇಗಿತ್ತು ಈತನ ಮೋಸದ ಹಾದಿ.. ಸಂಜಯ ನಗರ ವ್ಯಾಪ್ತಿಯ ನ್ಯೂ ಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಹೆಸರಿನ ಕಚೇರಿ ತೆರೆದಿದ್ದ ಆರೋಪಿ, ಸಿಇಟಿಯಲ್ಲಿ ರ್ಯಾಂಕಿಂಗ್‌ ಕಡಿಮೆ ಬಂದ ವಿದ್ಯಾರ್ಥಿಗಳ ಪೋಷಕರು, ವೈದ್ಯಕೀಯ ಶಿಕ್ಷಣ ಪಡೆಯಲು ಪ್ರಯತ್ನಿಸುತ್ತಿರುವವರ ಮಾಹಿತಿಯನ್ನು ಬೇರೆ ಬೇರೆ ಮೂಲಗಳಿಂದ ಸಂಗ್ರಹಿಸುತ್ತಿದ್ದ. ನಂತರ ಅವರುಗಳನ್ನ ಸಂಪರ್ಕಿಸಿ ಬೇರೆ ಬೇರೆ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಅಥವಾ ಡ್ರಾಪ್ ಔಟ್ ಆಗಿರುವ ಸೀಟುಗಳನ್ನು ಕಡಿಮೆ ಖರ್ಚಿನಲ್ಲಿ ತಾನು ಕೊಡಿಸುವುದಾಗಿ ನಂಬಿಸುತ್ತಿದ್ದ.

ಇದೇ ರೀತಿ ತಿಮ್ಮೇಗೌಡ ಎಂಬುವರ ಮಗನಿಗೆ ಕೇರಳದ ವೈದ್ಯಕೀಯ ಕಾಲೇಜೊಂದರಲ್ಲಿ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ, 12 ಲಕ್ಷ ಶುಲ್ಕ ಹೇಳಿ ನಂತರ ಹಂತಹಂತವಾಗಿ 10 ಲಕ್ಷ ರೂಪಾಯಿ ಪಡೆದುಕೊಂಡಿದ್ದ. ಸೀಟು ಕೊಡಿಸದಿದ್ದಾಗ ಆರೋಪಿಯ ಕಚೇರಿಗೆ ಬಂದು ಪರಿಶೀಲಿಸಿದಾಗ ಬೀಗ ಹಾಕಿರುವುದು, ಮತ್ತು 8-10 ಜನ ವಂಚನೆಗೊಳಗಾಗಿರುವುದು ತಿಳಿದು ಬಂದಿತ್ತು.

ನಂತರ ಸಂಜಯನಗರ ಪೊಲೀಸ್ ಠಾಣೆಯಲ್ಲಿ ತಿಮ್ಮೇಗೌಡ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ಕೈಗೊಂಡು ಹೈದರಾಬಾದ್ ನಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ವಂಚಿಸಿದ್ದ 62 ಲಕ್ಷ ರೂ. ಪೈಕಿ 47.80 ಲಕ್ಷ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.

ಇದನ್ನೂ ಓದಿ: ಜನರೇ ಎಚ್ಚರ.. ವಂಚಿಸಲೆಂದೇ 27 ವಿವಿಧ ವೇದಿಕೆಗಳನ್ನು ಬಳಸುತ್ತಿರುವ ಸೈಬರ್ ಕ್ರಿಮಿನಲ್‌ಗಳು: ಉದ್ಯೋಗದ ಹೆಸರಲ್ಲೇ ಹೆಚ್ಚು ಮೋಸ

ಇತ್ತೀಚಿನ ಪ್ರಕರಣ- ಬಿಬಿಎಂಪಿಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮಾರ್ಷಲ್‌ ಕೆಲಸ ಕೊಡಿಸುವುದಾಗಿ ನಂಬಿಸಿ, ನಕಲಿ ನೇಮಕಾತಿ ಪತ್ರ ನೀಡಿ ಹಣ ಪಡೆದು ವಂಚಿಸುತ್ತಿದ್ದ ಬಿಬಿಎಂಪಿ ನೌಕರನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ತಿಂಗಳ ಆರಂಭದಲ್ಲಿ ನಡೆದಿತ್ತು. ಜೆ.ಪಿ. ನಗರದ ನಿವಾಸಿ ಹರ್ಷ (23) ಎಂಬಾತನನ್ನು ಬಂಧಿಸಲಾಗಿತ್ತು. ವಂಚನೆಗೊಳಗಾದ ಸಂದೀಪ್ ಎಂಬವರು ಪೊಲೀಸರಿಗೆ ದೂರು ನೀಡಿದ್ದರು.

ಮೈಸೂರಲ್ಲೂ ಇಂತಹದ್ದೇ ಘಟನೆ: ಕೆಲಸ ಕೊಡುವುದಾಗಿ ಆನ್​​ಲೈನ್​​ನಲ್ಲಿ ಜಾಹೀರಾತು ನೀಡಿ ಮೆಕಾನಿಕಲ್ ಇಂಜಿನಿಯರ್​​ನಿಂದ 48 ಲಕ್ಷ ರೂ.ಪಡೆದು ವಂಚಿಸಿದ್ದ ಮೂವರು ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಕಂಪನಿಯ ಕೆಲಸಕ್ಕೆ ಆಯ್ಕೆಯಾಗಿದ್ದು, ಹಣ ಕಳುಹಿಸಿದರೆ ಆಯ್ಕೆ‌ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ ಎಂದು ನಂಬಿಸಿ ವಂಚನೆ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಮಹಿಳಾ ಉದ್ಯಮಿಗೆ ₹74 ಲಕ್ಷ ಹಣ ವಂಚನೆ, ಪ್ರಕರಣ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.