ಬೆಂಗಳೂರು: ಗಣೇಶ ಚತುರ್ಥಿ ದಿನದ ಪ್ರಯುಕ್ತ ಆಗಸ್ಟ್ 31ರಂದು ಬೆಂಗಳೂರು ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟಕ್ಕೆ ನಿಷೇಧ ವಿಧಿಸಿ ಬಿಬಿಎಂಪಿ ಆದೇಶಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಲಾಗಿದೆ ಎಂದು ಜಂಟಿ ನಿರ್ದೇಶಕರು (ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಇದನ್ನೂ ಓದಿ: ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಅವಕಾಶ: ಸುಪ್ರೀಂನಲ್ಲಿ ಇಂದು ವಕ್ಫ್ ಮಂಡಳಿ ಅರ್ಜಿ ವಿಚಾರಣೆ)