ETV Bharat / state

ಅಂತಾರಾಜ್ಯ ಜಲವಿವಾದಗಳ ಕುರಿತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

ಮೂರು ಜಲವಿವಾದಗಳ ಕುರಿತಂತೆ ನವದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಬಿಜೆಪಿ ಸಚಿವರು ಭಾಗಿಯಾಗಿದ್ದು, ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ.

-cm-bommai-
ಸಿಎಂ ಬೊಮ್ಮಾಯಿ
author img

By

Published : Aug 26, 2021, 10:44 AM IST

Updated : Aug 26, 2021, 3:42 PM IST

ನವದೆಹಲಿ: ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತಾರಾಜ್ಯ ಜಲವಿವಾದಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನವದೆಹಲಿಯಲ್ಲಿ ಕಾನೂನು ಮತ್ತು ತಾಂತ್ರಿಕ ತಜ್ಞರ ಜೊತೆ ಮಹತ್ವದ ಸಭೆ ನಡೆದಿದೆ.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಶಿವಕುಮಾರ್ ಉದಾಸಿ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಸಭೆಯಲ್ಲಿ ಭಾಗಿಯಾಗಿದ್ದರು.‌

ಅಂತಾರಾಜ್ಯ ಜಲವಿವಾದಗಳ ಬಗ್ಗೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಸೆಪ್ಟೆಂಬರ್ ತಿಂಗಳಲ್ಲಿ ಮಹದಾಯಿ ಕುರಿತು ವಿಚಾರಣೆ ದಿನಾಂಕ ನಿಗದಿಯಾಗಿದೆ. ಸಭೆಯಲ್ಲಿ ಹಲವಾರು ವಿಚಾರಗಳ ಕುರಿತು ಚರ್ಚಿಸಲಾಗಿದೆ ಎಂದರು.

ಈ ವೇಳೆ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ್ ಜೋಷಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಜೊತೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರಲ್ಲದೆ, ನವದೆಹಲಿಯ ಚಾಣಕ್ಯಪುರಿಯಲ್ಲಿರುವ ರಾಷ್ಟ್ರೀಯ ಪೊಲೀಸ್ ಸ್ಮಾರಕಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ: ಮೈಸೂರು ಮೇಯರ್‌ ಸ್ಥಾನದ ಗೆಲುವಿನಿಂದ ಈ ಭಾಗದಲ್ಲಿ ಬಿಜೆಪಿಗೆ ವೇಗ ಸಿಕ್ಕಿದೆ: ಕಟೀಲ್‌

Last Updated : Aug 26, 2021, 3:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.