ಬೆಂಗಳೂರು: ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯದ ಕೊರತೆ ನೀಗಿಸಲು ನವಲಿ ಗ್ರಾಮದ ಸಮೀಪ ಸಮತೋಲಿತ ನೀರು ಸಂಗ್ರಹಣಾ ಜಲಾಶಯ ನಿರ್ಮಾಣ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆ ನಡೆಯಿತು.
ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಹೂಳು ತುಂಬಿರುವುದರಿಂದ ತುಂಗಭದ್ರಾ ಅಣೆಕಟ್ಟಿನ ನೀರು ಸಂಗ್ರಹಣಾ ಸಾಮರ್ಥ್ಯ ಕಡಿಮೆಯಾಗಿದ್ದು, ಅದಕ್ಕೆ ಪರ್ಯಾಯವಾಗಿ ಪ್ರವಾಹ ಹರಿಯುವ ನಾಲೆ ಮೂಲಕ ಸಮತೋಲಿತ ಜಲಾಶಯ ನಿರ್ಮಾಣದ ಅವಶ್ಯಕತೆಯನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದರು.
ಓದಿ : ಸರ್ಕಾರದ ಸಹಾಯಕ ನಿರ್ದೇಶಕನಿಗೆ ಎಸಿಬಿ ಶಾಕ್: ದೇವೇಂದ್ರಪ್ಪ ಮನೆ, ಕಚೇರಿ ಮೇಲೆ ದಾಳಿ
ನವಲಿ ಸಮತೋಲಿತ ನೀರು ಸಂಗ್ರಹಣಾ ಜಲಾಶಯ ನಿರ್ಮಾಣ ಕುರಿತು ಮುಖ್ಯಮಂತ್ರಿಗಳು ಕರೆದ ಸಭೆಗೂ ಮುನ್ನ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಸಭೆ ನಡೆಸಿದರು. ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನಪ್ರತಿನಿಧಿಗಳೊಂದಿಗೆ ತಮ್ಮ ನಿವಾಸದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದರು. ನವಲಿ ಜಲಾಶಯ ನಿರ್ಮಾಣ ಕುರಿತು ವಿಸ್ತೃತವಾಗಿ ಸಮಾಲೋಚನೆ ನಡೆಸಿದರು.