ETV Bharat / state

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನೇತೃತ್ವದಲ್ಲಿ ತುರ್ತು ಸಭೆ - ಚುನಾವಣೋತ್ತರ ಸಮೀಕ್ಷೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತುರ್ತು ಸಭೆ ನಡೆಸಿದ್ದು, ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ.

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ

author img

By

Published : May 11, 2023, 10:49 PM IST

ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಇಂದು ರಾಜ್ಯ ಕಾಂಗ್ರೆಸ್ ನಾಯಕರ ಸಭೆ ನಡೆಯಿತು. ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಂಸದ ಡಿ ಕೆ ಸುರೇಶ್, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಭಾಗಿಯಾಗಿದ್ದರು. ಬಹಳ ಮಹತ್ವ ಪಡೆದುಕೊಂಡ ತುರ್ತು ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ. 224 ಕ್ಷೇತ್ರಗಳ ಅಭ್ಯರ್ಥಿಗಳಿಗೆ ಖುದ್ದು ಫೋನ್ ಮಾಡಿ ಮಾಹಿತಿ ಪಡೆದುಕೊಳ್ಳುತ್ತಿರುವ ಸುರ್ಜೇವಾಲಾ, ಆಯಾ ಕ್ಷೇತ್ರಗಳಲ್ಲಿ ಆಗಿರುವಂತಹ ಮತದಾನದ ಮಾಹಿತಿ ಪಡೆದಿದ್ದಾರೆ.

ಈಗಾಗಲೆ ಸಿದ್ದರಾಮಯ್ಯ ಜೊತೆ ಕೆಲ ಕಾಲ ಚರ್ಚೆ ನಡೆಸಿರುವ ಸುರ್ಜೇವಾಲಾ, ಎಲ್ಲಾ ಕ್ಷೇತ್ರಗಳಲ್ಲಿನ ಮತದಾನದ ಮಾಹಿತಿ ಸಂಗ್ರಹಿಸಿ ದಾಖಲಿಸಿಕೊಳ್ಳುವ ಕಾರ್ಯ ಮಾಡುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ಗೆ ಜ್ವರ: ನಿರಂತರವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಸುಸ್ತಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಬೆಳಗ್ಗಿನಿಂದ ಜ್ವರದಿಂದ ಬಳಲುತ್ತಿದ್ದಾರೆ. ಚುನಾವಣೆ ಕಾರಣಕ್ಕೆ ಸತತ ಓಡಾಟ ಹಿನ್ನೆಲೆ ಜ್ವರಕ್ಕೆ ತುತ್ತಾಗಿದ್ದು, ವಿಶ್ರಾಂತಿಗೆ ಮೊರೆ ಹೋಗಿದ್ದಾರೆ. ನಿನ್ನೆ ಮತದಾನ ಹಿನ್ನೆಲೆ ಕನಕಪುರದಲ್ಲಿ ಇದ್ದ ಅವರಿಗೆ ನಿನ್ನೆ ರಾತ್ರಿಯೇ ಜ್ವರದ ಲಕ್ಷಣ ಕಾಣಿಸಿಕೊಂಡಿದೆ. ಇಂದು ಕನಕಪುರದ ತಮ್ಮ ನಿವಾಸದಿಂದ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಹಿಂತಿರುಗಿರುವ ಅವರು ವಿಶ್ರಾಂತಿಯ ಮೊರೆ ಹೋಗಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ದಿನವಿಡೀ ಅವರು ಯಾರನ್ನು ಭೇಟಿಯಾಗಿಲ್ಲ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನೂ ಇವರಿಗೆ ಭೇಟಿ ಮಾಡಲು ಸಾಧ್ಯವಾಗಿಲ್ಲ. ಕೇವಲ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯನೊಂದಿಗೆ ಮಾತ್ರ ಚರ್ಚಿಸಿರುವ ಸುರ್ಜೆವಾಲಾ, ದೂರವಾಣಿ ಕರೆ ಮಾಡಿ ಡಿಕೆಶಿ ಆರೋಗ್ಯ ವಿಚಾರಿಸಿದ್ದಾರೆ ಎಂಬ ಮಾಹಿತಿ ಇದೆ. ಶನಿವಾರ ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಸರಳ ಬಹುಮತ ಗಳಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭಿಸಿದ್ದು, ಈ ವಿಚಾರವಾಗಿ ರಾಜ್ಯ ನಾಯಕರ ಜೊತೆ ಸುರ್ಜೇವಾಲಾ ಚರ್ಚಿಸಿದ್ದಾರೆ.

2023ರ ಎಕ್ಸಿಟ್​ ಪೋಲ್ಸ್​ ರಾಜಕೀಯ ಭವಿಷ್ಯ ನಿಜವಾಗುತ್ತಾ: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ಇದೀಗ ಫಲಿತಾಂಶದ ಬಗ್ಗೆ ವಿವಿಧ ಎಕ್ಸಿಟ್​ ಪೋಲ್​ಗಳು ಪ್ರಕಟವಾಗಿವೆ. ಈ ಬಗ್ಗೆ ಪರ ಮತ್ತು ವಿರೋಧ ಚರ್ಚೆ ಆಗುತ್ತಿದೆ. ಇದರ ಜೊತೆಗೆ ಕಳೆದ 2018ರ ಚುನಾವಣಾ ಸಂದರ್ಭದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಭವಿಷ್ಯ ಏನಾಗಿತ್ತು ಎಂಬ ಕುರಿತು ಕೂಡಾ ಚರ್ಚೆ ಆಗಿದೆ.

224 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ ಕನಿಷ್ಠ 113 ಸ್ಥಾನಗಳ ಅಗತ್ಯವಿದೆ. ರಾಜ್ಯ ಮತ್ತು ರಾಷ್ಟ್ರೀಯ ಸುದ್ದಿ ವಾಹಿನಿಗಳು ಹಾಗೂ ಸಂಸ್ಥೆಗಳ ಸಮೀಕ್ಷೆಗಳು ಸೇರಿ ಒಟ್ಟು 11 ಎಕ್ಸಿಟ್​ ಪೋಲ್​ಗಳು ಹೊರಬಿದ್ದಿವೆ. ಇದರಲ್ಲಿ ಬಹುತೇಕ ಸಮೀಕ್ಷೆಗಳು ಅತಂತ್ರ ಫಲಿತಾಂಶದ ಸೂಚನೆಯನ್ನು ಕೊಟ್ಟಿವೆ. ಆದರೆ ಇದರ ಜೊತೆಗೆ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: 2023ರ ಎಕ್ಸಿಟ್​ ಪೋಲ್ಸ್​ ರಾಜಕೀಯ ಭವಿಷ್ಯ ನಿಜವಾಗುತ್ತಾ? 2018ರಲ್ಲಿ ಸಮೀಕ್ಷೆಗಳು ಏನ್​ ಹೇಳಿದ್ದವು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.