ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ನಾಯಕರ ಸಭೆ ನಡೆಸಲಾಯಿತು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸಭೆ ನಡೆಸಿ ಪಕ್ಷ ಸಂಘಟನೆಯ ವಿಚಾರವಾಗಿ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಪಕ್ಷದ ಹಿರಿಯ ನಾಯಕರಾದ ವೀರಪ್ಪ ಮೊಯ್ಲಿ, ಕೆ.ಹೆಚ್ ಮುನಿಯಪ್ಪ, ಸಚಿವ ಶಿವಶಂಕರ್ ರೆಡ್ಡಿ, ಶಾಸಕರಾದ ಕೆ. ಸುಧಾಕರ್, ವಿ ಮುನಿಯಪ್ಪ, ಎಸ್.ಎನ್. ಸುಬ್ಬಾರೆಡ್ಡಿ ಸೇರಿದಂತೆ ಜಿಲ್ಲೆಯ ಹಲವು ನಾಯಕರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಆಯ್ಕೆ ಹಾಗೂ ಲೋಕಸಭೆ ಚುನಾವಣೆ ಸೋಲಿನ ಪರಾಮರ್ಶೆ ಸಭೆ ಇದಾಗಿತ್ತು. ದಿನೇಶ್ ಗುಂಡೂರಾವ್ ಪಕ್ಷದ ಅಭ್ಯರ್ಥಿ ಸೋಲಿನ ಬಗ್ಗೆ ಮಾಹಿತಿ ಪಡೆದರು.